ಸ್ವಾವಲಂಬನೆಗಾಗಿ ನವೀನ ತೋಟಗಾರಿಕೆ | ರಾಷ್ಟ್ರೀಯ ತೋಟಗಾರಿಕೆ ಮೇಳ -2023 |

February 18, 2023
1:55 PM

  ರೈತರಿಗೆ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಕುರಿತು ಸಮಸ್ಯೆಗೆ ಪರಿಹಾರ ಒದಗಿಸುವುದು ಸೇರಿ ವಿವಿಧ ವಿಚಾರಗಳ ಬಗ್ಗೆಸ್ವಾವಲಂಬನೆಗಾಗಿ ನವೀನ ತೋಟಗಾರಿಕೆಎಂಬ ವಿಷಯದಡಿ ಫೆ.22 ರಿಂದ 25ರವರೆಗೆರಾಷ್ಟ್ರೀಯ ತೋಟಗಾರಿಕೆ ಮೇಳ-2023” ನಡೆಯಲಿದೆ ಎಂದು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಂಜಯ್ಕುಮಾರ್ ಸಿಂಗ್ ತಿಳಿಸಿದರು.

   ಬೆಂಗಳೂರಿನ ಹೊರವಲಯ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಆವರಣದಲ್ಲಿ ಮೇಳ ನಡೆಯಲಿದೆ. ತೋಟಗಾರಿಕೆ ಉದ್ಯಮಿಗಳು ಪಾಲ್ಗೊಳ್ಳಲಿದ್ದಾರೆ. ದೇಶದ ಬೇರೆ ಬೇರೆ ರಾಜ್ಯಗಳಿಂದ ಲಕ್ಷಾಂತರ ರೈತರು ಆಗಮಿಸಲಿದ್ದಾರೆ. ರೈತರು ಮತ್ತು ತೋಟಗಾರಿಕೆ ಉದ್ಯಮಿಗಳು ತಯಾರಿಸಿದ ಹೊಸ ತಂತ್ರಜ್ಞಾನಗಳು ಮೇಳದಲ್ಲಿ ಪ್ರದರ್ಶನಗೊಳ್ಳಲಿದೆ. ಸಂಸ್ಥೆ ಹೊಸದಾಗಿ ಸೃಷ್ಠಿಸಿದ ತಳಿಗಳು, ಅಭಿವೃದ್ಧಿ ಪಡಿಸಲಾದ ತೋಟಗಾರಿಕೆ ಬೀಜಗಳನ್ನು ಮೇಳದಲ್ಲಿ ಪ್ರದರ್ಶಿಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

250 ಮಳಿಗೆಗಳನ್ನು ತೆರೆಯಲಾಗಿದೆ. ಜೈವಿಕ ಗೊಬ್ಬರ. ವಿಶೇಷ ತಳಿಯ ಹಣ್ಣಿನ ಗಿಡಗಳು, ಬಿತ್ತನೆ ಬೀಜಗಳು, ಜೈವಿಕ ಗೊಬ್ಬರ, ಕೃಷಿ ಯಂತ್ರೋಪಕರಣಗಳ ಮಳಿಗೆಗಳ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಮಾಡಲಾಗಿದೆ. ಫೆ.25 ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ 20 ಉತ್ತಮ ರೈತರಿಗೆ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಹೇಳಿದರು. ಮೇಳದ ಪ್ರಚಾರ ಸಮಿತಿ ಅಧ್ಯಕ್ಷ ಡಾ.ನಂದೀಶ್‌ .ಪಿ. ಸಂಘಟನಾ ಕಾರ್ಯದರ್ಶಿ ಡಾ. ವೆಂಕಟ್ಕುಮಾರ್ಮತ್ತಿತರರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror