ಸ್ವಾವಲಂಬನೆಗಾಗಿ ನವೀನ ತೋಟಗಾರಿಕೆ | ರಾಷ್ಟ್ರೀಯ ತೋಟಗಾರಿಕೆ ಮೇಳ -2023 |

February 18, 2023
1:55 PM

  ರೈತರಿಗೆ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಕುರಿತು ಸಮಸ್ಯೆಗೆ ಪರಿಹಾರ ಒದಗಿಸುವುದು ಸೇರಿ ವಿವಿಧ ವಿಚಾರಗಳ ಬಗ್ಗೆ ‘ಸ್ವಾವಲಂಬನೆಗಾಗಿ ನವೀನ ತೋಟಗಾರಿಕೆ” ಎಂಬ ವಿಷಯದಡಿ ಫೆ.22 ರಿಂದ 25ರವರೆಗೆ ‘ರಾಷ್ಟ್ರೀಯ ತೋಟಗಾರಿಕೆ ಮೇಳ-2023” ನಡೆಯಲಿದೆ ಎಂದು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಂಜಯ್‌ ಕುಮಾರ್ ಸಿಂಗ್ ತಿಳಿಸಿದರು.

   ಬೆಂಗಳೂರಿನ ಹೊರವಲಯ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಆವರಣದಲ್ಲಿ ಮೇಳ ನಡೆಯಲಿದೆ. ತೋಟಗಾರಿಕೆ ಉದ್ಯಮಿಗಳು ಪಾಲ್ಗೊಳ್ಳಲಿದ್ದಾರೆ. ದೇಶದ ಬೇರೆ ಬೇರೆ ರಾಜ್ಯಗಳಿಂದ ಲಕ್ಷಾಂತರ ರೈತರು ಆಗಮಿಸಲಿದ್ದಾರೆ. ರೈತರು ಮತ್ತು ತೋಟಗಾರಿಕೆ ಉದ್ಯಮಿಗಳು ತಯಾರಿಸಿದ ಹೊಸ ತಂತ್ರಜ್ಞಾನಗಳು ಮೇಳದಲ್ಲಿ ಪ್ರದರ್ಶನಗೊಳ್ಳಲಿದೆ. ಸಂಸ್ಥೆ ಹೊಸದಾಗಿ ಸೃಷ್ಠಿಸಿದ ತಳಿಗಳು, ಅಭಿವೃದ್ಧಿ ಪಡಿಸಲಾದ ತೋಟಗಾರಿಕೆ ಬೀಜಗಳನ್ನು ಮೇಳದಲ್ಲಿ ಪ್ರದರ್ಶಿಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

250 ಮಳಿಗೆಗಳನ್ನು ತೆರೆಯಲಾಗಿದೆ. ಜೈವಿಕ ಗೊಬ್ಬರ. ವಿಶೇಷ ತಳಿಯ ಹಣ್ಣಿನ ಗಿಡಗಳು, ಬಿತ್ತನೆ ಬೀಜಗಳು, ಜೈವಿಕ ಗೊಬ್ಬರ, ಕೃಷಿ ಯಂತ್ರೋಪಕರಣಗಳ ಮಳಿಗೆಗಳ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಮಾಡಲಾಗಿದೆ. ಫೆ.25 ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ 20 ಉತ್ತಮ ರೈತರಿಗೆ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಹೇಳಿದರು. ಮೇಳದ ಪ್ರಚಾರ ಸಮಿತಿ ಅಧ್ಯಕ್ಷ ಡಾ.ನಂದೀಶ್‌ .ಪಿ. ಸಂಘಟನಾ ಕಾರ್ಯದರ್ಶಿ ಡಾ. ವೆಂಕಟ್‌ ಕುಮಾರ್ ‌ ಮತ್ತಿತರರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror