ರೈತರಿಗೆ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಕುರಿತು ಸಮಸ್ಯೆಗೆ ಪರಿಹಾರ ಒದಗಿಸುವುದು ಸೇರಿ ವಿವಿಧ ವಿಚಾರಗಳ ಬಗ್ಗೆ ‘ಸ್ವಾವಲಂಬನೆಗಾಗಿ ನವೀನ ತೋಟಗಾರಿಕೆ” ಎಂಬ ವಿಷಯದಡಿ ಫೆ.22 ರಿಂದ 25ರವರೆಗೆ ‘ರಾಷ್ಟ್ರೀಯ ತೋಟಗಾರಿಕೆ ಮೇಳ-2023” ನಡೆಯಲಿದೆ ಎಂದು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಂಜಯ್ ಕುಮಾರ್ ಸಿಂಗ್ ತಿಳಿಸಿದರು.
ಬೆಂಗಳೂರಿನ ಹೊರವಲಯ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಆವರಣದಲ್ಲಿ ಮೇಳ ನಡೆಯಲಿದೆ. ತೋಟಗಾರಿಕೆ ಉದ್ಯಮಿಗಳು ಪಾಲ್ಗೊಳ್ಳಲಿದ್ದಾರೆ. ದೇಶದ ಬೇರೆ ಬೇರೆ ರಾಜ್ಯಗಳಿಂದ ಲಕ್ಷಾಂತರ ರೈತರು ಆಗಮಿಸಲಿದ್ದಾರೆ. ರೈತರು ಮತ್ತು ತೋಟಗಾರಿಕೆ ಉದ್ಯಮಿಗಳು ತಯಾರಿಸಿದ ಹೊಸ ತಂತ್ರಜ್ಞಾನಗಳು ಮೇಳದಲ್ಲಿ ಪ್ರದರ್ಶನಗೊಳ್ಳಲಿದೆ. ಸಂಸ್ಥೆ ಹೊಸದಾಗಿ ಸೃಷ್ಠಿಸಿದ ತಳಿಗಳು, ಅಭಿವೃದ್ಧಿ ಪಡಿಸಲಾದ ತೋಟಗಾರಿಕೆ ಬೀಜಗಳನ್ನು ಮೇಳದಲ್ಲಿ ಪ್ರದರ್ಶಿಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
250 ಮಳಿಗೆಗಳನ್ನು ತೆರೆಯಲಾಗಿದೆ. ಜೈವಿಕ ಗೊಬ್ಬರ. ವಿಶೇಷ ತಳಿಯ ಹಣ್ಣಿನ ಗಿಡಗಳು, ಬಿತ್ತನೆ ಬೀಜಗಳು, ಜೈವಿಕ ಗೊಬ್ಬರ, ಕೃಷಿ ಯಂತ್ರೋಪಕರಣಗಳ ಮಳಿಗೆಗಳ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಮಾಡಲಾಗಿದೆ. ಫೆ.25 ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ 20 ಉತ್ತಮ ರೈತರಿಗೆ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಹೇಳಿದರು. ಮೇಳದ ಪ್ರಚಾರ ಸಮಿತಿ ಅಧ್ಯಕ್ಷ ಡಾ.ನಂದೀಶ್ .ಪಿ. ಸಂಘಟನಾ ಕಾರ್ಯದರ್ಶಿ ಡಾ. ವೆಂಕಟ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…