ಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ

May 1, 2025
7:55 AM

ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ 6 ರ ತನಕ ಮಂಗಳೂರು ಟೌನ್ ಹಾಲ್ ನಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಚೆಸ್‌ ಎಸೋಸಿಯೇಶನ್‌ ಅಧ್ಯಕ್ಷ ರಮೇಶ್‌ ಕೋಟೆ ತಿಳಿಸಿದ್ದಾರೆ.…..ಮುಂದೆ ಓದಿ….

Advertisement

ದೇಶದಲ್ಲಿ ಚೆಸ್ ದಿನೇ ದಿನೇ ಬಹಳ ವೇಗವಾಗಿ ಬೆಳೆಯುತ್ತಿರುವ ಕ್ರೀಡೆಯಾಗಿದ್ದು,ಈ ಬಾರಿ ನಮ್ಮ ದೇಶ ವಿಶ್ವ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು ಹೆಮ್ಮೆಯ ವಿಷಯವಾಗಿದೆ. ನಮ್ಮ ಜಿಲ್ಲೆಯು ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಆಟಗಾರರನ್ನು ಹೊಂದಿದೆ.ಚೆಸ್ ಆಟದ ಬೆಳವಣಿಗೆಯ ಪೂರಕವಾಗಿ ನಾವು ಈ ಪಂದ್ಯಾಟವನ್ನು ಹಮ್ಮಿಕೊಂಡಿದ್ದು,ಇದರಲ್ಲಿ,ಬೇರೆ ಬೇರೆ ರಾಜ್ಯಗಳ ಆಟಗಾರರು ಅಲ್ಲದೇ, ಅಂತಾರಾಷ್ಟ್ರೀಯ ಮಟ್ಟದ ಆಟಗಾರರ ಸಹಿತ ಸುಮಾರು 400 ಆಟಗಾರರು ಭಾಗವಹಿಸುವ ನಿರೀಕ್ಷೆಯಲ್ಲಿದ್ದೇವೆ.

ಮಂಗಳೂರು ನಗರ ಚೆಸ್ ಆಟದಲ್ಲಿ ಪಂದ್ಯಾವಳಿಯಲ್ಲಿ ನಮ್ಮ ದೇಶಕ್ಕೇ ಮಾದರಿಯಾಗುತ್ತಾ, ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ ಹಾಗೂ ಉತ್ತಮ ಆಟಗಾರರನ್ನು ಪರಿಚಯಿಸುತ್ತಿದೆ. ಮೇ 2 ರಿಂದ 6 ರ ತನಕ ಮಂಗಳೂರು ಟೌನ್ ಹಾಲ್ ನಲ್ಲಿ ನಿರಂತರ 5 ದಿನ 9 ರೌಂಡಗಳಲ್ಲಿ ಪಂದ್ಯಾಟ ನಡೆಯಲಿದೆ.

ಕಾರ್ಯಕ್ರಮವನ್ನು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ  ಯತೀಶ್ IPS  ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ,KSCA ಅಧ್ಯಕ್ಷ  ಮದುಕರ್, MRPL group General Manager ಕೃಷ್ಣ ಹೆಗ್ಡೆ ಮಿಯಾರ್ ಭಾಗವಹಿಸಲಿರುವರು.ಮೇ 6 ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ ಎಂದು ರಮೇಶ್‌ ಕೋಟೆ ತಿಳಿಸಿದ್ದಾರೆ.

ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಚೆಸ್‌ ಎಸೋಸಿಯೇಶನ್‌ ಗೌರವಾಧ್ಯಕ್ಷ  ಸುನೀಲ್ ಆಚಾರ್ , ಉಪಾಧ್ಯಕ್ಷೆ ವಾಣಿ ಎಸ್ ಪಣಿಕ್ಕರ್, ಕಾರ್ಯದರ್ಶಿ ಅಭಿಷೇಕ್ ಕಟ್ಟೇಮಾರ್ , ಜೊತೆ ಕಾರ್ಯದರ್ಶಿ  ಸತ್ಯಪ್ರಸಾದ್ , ಖಜಾಂಜಿ ರಮ್ಯಾ ಎಸ್ ರೈ ಇದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶದಾದ್ಯಂತ ಸಾಮಾನ್ಯ ಮಳೆ | ಮಲೆನಾಡು-ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ
July 16, 2025
7:51 AM
by: ದ ರೂರಲ್ ಮಿರರ್.ಕಾಂ
ಆರೋಗ್ಯದಲ್ಲಿ ಈ ರಾಶಿಯವರಿಗೆ ದೀರ್ಘಕಾಲದ ಕಾಯಿಲೆಯಿಂದ ಚೇತರಿಕೆ
July 16, 2025
7:17 AM
by: ದ ರೂರಲ್ ಮಿರರ್.ಕಾಂ
ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ
July 15, 2025
9:39 PM
by: ದ ರೂರಲ್ ಮಿರರ್.ಕಾಂ
ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ
July 15, 2025
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror