Advertisement
MIRROR FOCUS

ಅ.2 : ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ರಾಪಿಡ್ ರೇಟೆಡ್ ಚೆಸ್ ಪಂದ್ಯಾವಳಿ |

Share

ರಾಷ್ಟ್ರೀಯ ಓಪನ್-ರಾಪಿಡ್ ರೇಟೆಡ್ ಚೆಸ್ ಪಂದ್ಯಾವಳಿ ಅಕ್ಟೋಬರ್  2 ಮತ್ತು 3ರಂದು ಮಂಗಳೂರು ಟೌನ್ ಹಾಲ್ ನಲ್ಲಿ 9 ರೌಂಡ್ ಗಳಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಚೆಸ್‌ ಎಸೋಸಿಯೇಶನ್‌ (DKCA) ಅಧ್ಯಕ್ಷ ರಮೇಶ್‌ ಕೋಟೆ ತಿಳಿಸಿದ್ದಾರೆ.…..ಮುಂದೆ ಓದಿ….

Advertisement
Advertisement
Advertisement

Advertisement

ಚೆಸ್ ದಿನೇ ದಿನೇ ಬಹಳ ವೇಗವಾಗಿ ಬೆಳೆಯುತ್ತಿರುವ ಕ್ರೀಡೆಯಾಗಿದ್ದು,  ದ ಕ ಜಿಲ್ಲೆಯಲ್ಲೂ ಹಲವಾರು ಮಂದಿ ಕ್ರೀಡಾಪಟುಗಳು ಇದ್ದಾರೆ. ಈಗಾಗಲೇ  ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಆಟಗಾರರನ್ನು ದ ಕ ಜಿಲ್ಲೆ ಹೊಂದಿದೆ.ಚೆಸ್ ಆಟದ ಬೆಳವಣಿಗೆಯ ಪೂರಕವಾಗಿ ಎಸೋಸಿಯೇಶನ್ ಈ ಪಂದ್ಯಾಟವನ್ನು ಹಮ್ಮಿಕೊಂಡಿದ್ದು,ಇದರಲ್ಲಿ,ಬೇರೆ ಬೇರೆ ರಾಜ್ಯಗಳ ಆಟಗಾರರು ಅಲ್ಲದೇ, ಅಂತಾರಾಷ್ಟ್ರೀಯ ಮಟ್ಟದ ಆಟಗಾರರ ಸಹಿತ ಸುಮಾರು 400 ಆಟಗಾರರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಕಾರ್ಯಕ್ರಮ ಉದ್ಘಾಟನೆಯನ್ನು ಅ 2 ರಂದು MRPL ನ ಆಡಳಿತ ಮಂಡಳಿ ನಿರ್ದೇಶಕ ಸುದರ್ಶನ್ ನೆರವೇರಿಸಲಿರುವರು.
ಮುಖ್ಯ ಅತಿಥಿಗಳಾಗಿ KSCA ಜನರಲ್ ಸೆಕ್ರೆಟರಿ ಅರವಿಂದ ಶಾಸ್ತ್ರಿ, ಶ್ರೀಶಾ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಗುರುರಾಜ್,  ಭಾಗವಹಿಸಲಿರುವರು. ಅ.3 ರಂದು ಸಮಾರೋಪ ಸಮಾರಂಭ ನಡೆಯಲಿದೆ MRPL ನ GGM ಕೃಷ್ಣ ಹೆಗ್ಡೆ ಹಾಗೂ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ ಎಂದರು.

Advertisement

ಟೂರ್ನಿಯಲ್ಲಿ2.4 ಲಕ್ಷ ನಗದು ಬಹುಮಾನ,ಅಲ್ಲದೇ ಅಕ್ಟೋಬರ್ 3ರಂದು ಮಧ್ಯಾಹ್ನ ನಂತರ Blitz ಚೆಸ್ ಪಂದ್ಯಟವನ್ನೂ ಹಮ್ಮಿಕೊಳ್ಳಲಾಗಿದೆ. ಅಲ್ಲದೇ ವಿವಿಧ ವಿಭಾಗಗಳ ಟ್ರೋಫಿಜೊತೆಗೆ ಸುಮಾರು ನೂರೈವತ್ತಕ್ಕೂ ಮಿಕ್ಕಿ ಬಹುಮಾನಗಳು ಇರಲಿವೆ.ಮಂಗಳೂರಿನ MRPL ಸಂಸ್ಥೆ ಚೆಸ್ ಪಂದ್ಯಾವಳಿಗೆ ಹೆಚ್ಚಿನ ಮಹತ್ವ ನೀಡಿದ್ದು ಮಾತ್ರವಲ್ಲದೇ ದ.ಕ ಜಿಲ್ಲೆಯ ಸಂಪೂರ್ಣ ಬೆಳವಣಿಗೆಯಲ್ಲಿ ಮಹತ್ತರ ಪಾತ್ರವಹಿಸಿದೆ ಎಂದು ರಮೇಶ್‌  ಕೋಟೆ ತಿಳಿಸಿದ್ದಾರೆ.

ಈ ಸಂದರ್ಭ ದಕ್ಷಿಣ ಕನ್ನಡ ಚೆಸ್‌ ಎಸೋಸಿಯೇಶನ್‌ (DKCA) ಗೌರವಾಧ್ಯಕ್ಷ  ಸುನೀಲ್ ಆಚಾರ್ , ಉಪಾಧ್ಯಕ್ಷೆ ವಾಣಿ ಎಸ್ ಪಣಿಕ್ಕರ್ , ಖಜಾಂಜಿ  ಪೂರ್ಣಿಮಾ ಎಸ್ ಆಳ್ವಾ , ಜೊತೆಕಾರ್ಯದರ್ಶಿ ಸತ್ಯಪ್ರಸಾದ್ ಕಮಿಲ,  ಜೊತೆ ಖಜಾಂಜಿ  ರಮ್ಯಾ ಎಸ್ ರೈ ಇದ್ದರು.‌ …..ಮುಂದೆ ಓದಿ….

Advertisement

ರಮೇಶ್‌ ಕೋಟೆ ಅವರ ಜೊತೆಗಿನ ಮಾತುಕತೆ ಇಲ್ಲಿದೆ….

Advertisement

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೋಲಾರದಲ್ಲಿ ಅತೀ ಹೆಚ್ಚು ನಕಲಿ ವೈದ್ಯರು…! | ನಕಲಿ ವೈದ್ಯರ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…

6 hours ago

ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ  ಮನವಿ

ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…

6 hours ago

ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ದೆಹಲಿಯಲ್ಲಿ ಲಭ್ಯ | 2.5 ಲಕ್ಷ ಲೀಟರ್ ಹಾಲು ದೆಹಲಿಗೆ ಪೂರೈಸಲು ತೀರ್ಮಾನ |

ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…

6 hours ago

ಹುಣಸೆ ಹಣ್ಣು ಸಂರಕ್ಷಣೆ, ಮಾರಾಟದ ತರಬೇತಿ ಕಾರ್ಯಾಗಾರ

ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…

7 hours ago

ಧರ್ಮಸ್ಥಳ ಯಕ್ಷಗಾನ ಮೇಳ |  ಸೇವೆ ಬಯಲಾಟ ಪ್ರದರ್ಶನ

ನಾಡಿನ ಪವಿತ್ರ ಕ್ಷೇತ್ರ  ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200…

7 hours ago

ಜೇನು ತುಪ್ಪ ಮಾರಾಟ | ಅರ್ಜಿ ಆಹ್ವಾನ

ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ…

7 hours ago