ರಾಷ್ಟ್ರೀಯ ಓಪನ್-ರಾಪಿಡ್ ರೇಟೆಡ್ ಚೆಸ್ ಪಂದ್ಯಾವಳಿ ಅಕ್ಟೋಬರ್ 2 ಮತ್ತು 3ರಂದು ಮಂಗಳೂರು ಟೌನ್ ಹಾಲ್ ನಲ್ಲಿ 9 ರೌಂಡ್ ಗಳಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಚೆಸ್ ಎಸೋಸಿಯೇಶನ್ (DKCA) ಅಧ್ಯಕ್ಷ ರಮೇಶ್ ಕೋಟೆ ತಿಳಿಸಿದ್ದಾರೆ.…..ಮುಂದೆ ಓದಿ….
ಚೆಸ್ ದಿನೇ ದಿನೇ ಬಹಳ ವೇಗವಾಗಿ ಬೆಳೆಯುತ್ತಿರುವ ಕ್ರೀಡೆಯಾಗಿದ್ದು, ದ ಕ ಜಿಲ್ಲೆಯಲ್ಲೂ ಹಲವಾರು ಮಂದಿ ಕ್ರೀಡಾಪಟುಗಳು ಇದ್ದಾರೆ. ಈಗಾಗಲೇ ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಆಟಗಾರರನ್ನು ದ ಕ ಜಿಲ್ಲೆ ಹೊಂದಿದೆ.ಚೆಸ್ ಆಟದ ಬೆಳವಣಿಗೆಯ ಪೂರಕವಾಗಿ ಎಸೋಸಿಯೇಶನ್ ಈ ಪಂದ್ಯಾಟವನ್ನು ಹಮ್ಮಿಕೊಂಡಿದ್ದು,ಇದರಲ್ಲಿ,ಬೇರೆ ಬೇರೆ ರಾಜ್ಯಗಳ ಆಟಗಾರರು ಅಲ್ಲದೇ, ಅಂತಾರಾಷ್ಟ್ರೀಯ ಮಟ್ಟದ ಆಟಗಾರರ ಸಹಿತ ಸುಮಾರು 400 ಆಟಗಾರರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಕಾರ್ಯಕ್ರಮ ಉದ್ಘಾಟನೆಯನ್ನು ಅ 2 ರಂದು MRPL ನ ಆಡಳಿತ ಮಂಡಳಿ ನಿರ್ದೇಶಕ ಸುದರ್ಶನ್ ನೆರವೇರಿಸಲಿರುವರು.
ಮುಖ್ಯ ಅತಿಥಿಗಳಾಗಿ KSCA ಜನರಲ್ ಸೆಕ್ರೆಟರಿ ಅರವಿಂದ ಶಾಸ್ತ್ರಿ, ಶ್ರೀಶಾ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಗುರುರಾಜ್, ಭಾಗವಹಿಸಲಿರುವರು. ಅ.3 ರಂದು ಸಮಾರೋಪ ಸಮಾರಂಭ ನಡೆಯಲಿದೆ MRPL ನ GGM ಕೃಷ್ಣ ಹೆಗ್ಡೆ ಹಾಗೂ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಟೂರ್ನಿಯಲ್ಲಿ2.4 ಲಕ್ಷ ನಗದು ಬಹುಮಾನ,ಅಲ್ಲದೇ ಅಕ್ಟೋಬರ್ 3ರಂದು ಮಧ್ಯಾಹ್ನ ನಂತರ Blitz ಚೆಸ್ ಪಂದ್ಯಟವನ್ನೂ ಹಮ್ಮಿಕೊಳ್ಳಲಾಗಿದೆ. ಅಲ್ಲದೇ ವಿವಿಧ ವಿಭಾಗಗಳ ಟ್ರೋಫಿಜೊತೆಗೆ ಸುಮಾರು ನೂರೈವತ್ತಕ್ಕೂ ಮಿಕ್ಕಿ ಬಹುಮಾನಗಳು ಇರಲಿವೆ.ಮಂಗಳೂರಿನ MRPL ಸಂಸ್ಥೆ ಚೆಸ್ ಪಂದ್ಯಾವಳಿಗೆ ಹೆಚ್ಚಿನ ಮಹತ್ವ ನೀಡಿದ್ದು ಮಾತ್ರವಲ್ಲದೇ ದ.ಕ ಜಿಲ್ಲೆಯ ಸಂಪೂರ್ಣ ಬೆಳವಣಿಗೆಯಲ್ಲಿ ಮಹತ್ತರ ಪಾತ್ರವಹಿಸಿದೆ ಎಂದು ರಮೇಶ್ ಕೋಟೆ ತಿಳಿಸಿದ್ದಾರೆ.
ಈ ಸಂದರ್ಭ ದಕ್ಷಿಣ ಕನ್ನಡ ಚೆಸ್ ಎಸೋಸಿಯೇಶನ್ (DKCA) ಗೌರವಾಧ್ಯಕ್ಷ ಸುನೀಲ್ ಆಚಾರ್ , ಉಪಾಧ್ಯಕ್ಷೆ ವಾಣಿ ಎಸ್ ಪಣಿಕ್ಕರ್ , ಖಜಾಂಜಿ ಪೂರ್ಣಿಮಾ ಎಸ್ ಆಳ್ವಾ , ಜೊತೆಕಾರ್ಯದರ್ಶಿ ಸತ್ಯಪ್ರಸಾದ್ ಕಮಿಲ, ಜೊತೆ ಖಜಾಂಜಿ ರಮ್ಯಾ ಎಸ್ ರೈ ಇದ್ದರು. …..ಮುಂದೆ ಓದಿ….
ರಮೇಶ್ ಕೋಟೆ ಅವರ ಜೊತೆಗಿನ ಮಾತುಕತೆ ಇಲ್ಲಿದೆ….
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…