ತೆಲಂಗಾಣದ ನಿಜಾಮಾಬಾದ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ರಾಷ್ಟ್ರೀಯ ಅರಿಶಿಣ ಮಂಡಳಿಯನ್ನು ಉದ್ಘಾಟಿಸಿದರು.
ಬಳಿಕ ನಡೆದ ರೈತರ ಸಮಾವೇಶದಲ್ಲಿ ಮಾತನಾಡಿದ ಅಮಿತ್ ಶಾ, ಭಾರತೀಯ ರೈತರು ನಾವಿನ್ಯತೆ ಮತ್ತು ಜಾಗತಿಕ ಮಟ್ಟದ ಸ್ಪರ್ಧೆಯನ್ನು ಸಮರ್ಥವಾಗಿ ಎದುರಿಸುವ ಸಾಮರ್ಥ್ಯ ಹೊಂದಿದ್ದಾರೆ. ನಿಜಾಮಾಬಾದ್ ಅರಿಶಿಣದ ಬೆಳೆಗೆ ಪ್ರಸಿದ್ಧಿಯಾಗಿದ್ದು, ಸ್ಥಳೀಯ ಕೃಷಿ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆಯನ್ನು ಒದಗಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದೆ ಎಂದು ತಿಳಿಸಿದರು. ರೈತರ 4 ದಶಕಗಳ ಬೇಡಿಕೆಯಾಗಿದ್ದ ಅರಿಶಿಣ ಮಂಡಳಿ ಸ್ಥಾಪಿಸುವ ಮೂಲಕ ಕೃಷಿಕರ ಆಶೋತ್ತರಗಳಿಗೆ ದನಿಯಾಗಿದೆ. ರೈತರ ವಿಕಾಸ ಸರ್ಕಾರದ ಬದ್ಧತೆಯಾಗಿದ್ದು, ಅನೇಕ ರೈತಸ್ನೇಹಿ ಯೋಜನೆಗಳು ಜಾರಿಗೆ ಬಂದಿವೆ ಎಂದು ಹೇಳಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel