ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ

July 25, 2026
7:44 AM
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್ಶಿಪ್ ನಡೆಯಲಿದೆ. ದೇಶದ ವಿವಿಧ ಭಾಗಗಳಿಂದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗವಹಿಸುವ ನಿರೀಕ್ಷೆಯಿದೆ.

ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ , ಮಂಗಳೂರು ವತಿಯಿಂದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್ಶಿಪ್–2026 ಆಗಸ್ಟ್ 2 ರಿಂದ 8 ರವರೆಗೆ ಮಂಗಳೂರಿನ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ ಕಳೆದ ಎಂಟು ವರ್ಷಗಳಿಂದ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಚೆಸ್ ಪಂದ್ಯಾವಳಿಗಳನ್ನು ಯಶಸ್ವಿಯಾಗಿ ಆಯೋಜಿಸುತ್ತಾ ಬಂದಿದ್ದು, ಇದೀಗ ಮತ್ತೊಮ್ಮೆ ಜಿಲ್ಲೆಯ ಕೀರ್ತಿಗೆ ಮತ್ತೊಂದು ಗರಿ ಸೇರಿಸುವಂತೆ ರಾಷ್ಟ್ರೀಯ ಮಟ್ಟದ ಈ ಪ್ರತಿಷ್ಠಿತ ಚಾಂಪಿಯನ್ಶಿಪ್‌ಗೆ ಆತಿಥ್ಯ ವಹಿಸುತ್ತಿದೆ.

ಈ ಚಾಂಪಿಯನ್ಶಿಪ್‌ನಲ್ಲಿ ದೇಶದ ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ 600 ಕ್ಕೂ ಅಧಿಕ ಆಟಗಾರರು, ತರಬೇತುದಾರರು ಮತ್ತು ಪೋಷಕರು ಭಾಗವಹಿಸುವ ನಿರೀಕ್ಷೆಯಿದೆ. ಕರ್ನಾಟಕಕ್ಕೆ ಹಾಗೂ ವಿಶೇಷವಾಗಿ ಕರಾವಳಿ ಭಾಗಕ್ಕೆ ರಾಷ್ಟ್ರೀಯ ಮಟ್ಟದ ಈ ಚೆಸ್ ಪಂದ್ಯಾವಳಿ ಆಯೋಜನೆಯಾಗುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು  ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ ಗೌರವಾಧ್ಯಕ್ಷ  ಸುನಿಲ್ ಆಚಾರ್, ಅಧ್ಯಕ್ಷ ಡಾ. ಅಮರಶ್ರೀ ಅಮರನಾಥ ಶೆಟ್ಟಿ, ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ ಉಪಾಧ್ಯಕ್ಷ  ರಮೇಶ್ ಕೋಟೆ, ಉಪಾಧ್ಯಕ್ಷೆ ಡಾ. ವಾಣಿ ಎಸ್. ಪಣಿಕ್ಕರ್ ಹಾಗೂ ಖಜಾಂಚಿ  ಕ್ರತಿನ್ ಕುಮಾರ್ ತಿಳಿಸಿದ್ದಾರೆ.

Dakshina Kannada Chess Association will host the National Under-11 Open & Girls Chess Championship 2026 from August 2 to 8 at Urwa Indoor Stadium, Mangaluru. More than 600 players, coaches and parents from across India are expected to participate in the prestigious national event.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror