ರಾಸಾಯನಿಕ ಅವಲಂಬನೆ ಕಡಿಮೆ ಮಾಡಿ ನೈಸರ್ಗಿಕ ಕೃಷಿ ಬಲಪಡಿಸಲು ಕರೆ

February 5, 2026
7:30 AM
ಕೃಷಿ ವಿಶ್ವವಿದ್ಯಾಲಯಗಳು ನೈಸರ್ಗಿಕ ಕೃಷಿ ಕ್ರಾಂತಿಗೆ ಮುನ್ನಡೆಯಾಗಬೇಕು ಎಂದು ರಾಜ್ಯಪಾಲ ಆಚಾರ್ಯ ದೇವವ್ರತ್ ಹೇಳಿದ್ದಾರೆ.

ಕೃಷಿ ವಿಶ್ವವಿದ್ಯಾಲಯಗಳು ನೈಸರ್ಗಿಕ ಕೃಷಿ ಕ್ರಾಂತಿಯನ್ನು ಮುನ್ನಡೆಸಬೇಕು ಹಾಗೂ ಸುಸ್ಥಿರ ಇಳುವರಿಯನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಬೀಜಗಳ ಪುನರುಜ್ಜೀವನಕ್ಕೆ ಒತ್ತು ನೀಡಬೇಕು ಎಂದು ಮಹಾರಾಷ್ಟ್ರ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಅವರು ಕರೆ ನೀಡಿದ್ದಾರೆ.

ಮುಂಬೈನ ಲೋಕಭವನದಿಂದ ವೀಡಿಯೊ ಸಮ್ಮೇಳನದ ಮೂಲಕ ಈಚೆಗೆ ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ರಾಜ್ಯದ ಕೃಷಿ ಹಾಗೂ ಪಶುವೈದ್ಯಕೀಯ ವಿಶ್ವವಿದ್ಯಾಲಯಗಳ ಕುಲಪತಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ದುಬಾರಿ ಹೈಬ್ರಿಡ್ ಬೀಜಗಳು ಮತ್ತು ರಾಸಾಯನಿಕ ಒಳಹರಿವಿನ ಮೇಲಿನ ಅತಿಯಾದ ಅವಲಂಬನೆ ಕಡಿಮೆಯಾಗಬೇಕಾಗಿದೆ ಎಂದು ಒತ್ತಿ ಹೇಳಿದರು. ನೈಸರ್ಗಿಕ ಕೃಷಿಯನ್ನು ಬಲಪಡಿಸುವ ದಿಕ್ಕಿನಲ್ಲಿ ಸ್ಥಳೀಯ ಬೀಜ ಸಂಶೋಧನೆ, ಮಾದರಿ ಸಾಕಣೆ ಕೇಂದ್ರಗಳ ಸ್ಥಾಪನೆ ಹಾಗೂ ರೈತರಿಗೆ ತರಬೇತಿ ಕಾರ್ಯಕ್ರಮಗಳನ್ನು ವಿಸ್ತರಿಸುವ ಅಗತ್ಯವಿದೆ ಎಂದು ಅವರು ಹೇಳಿದರು. ಇದರಿಂದ ರೈತರ ಉತ್ಪಾದನಾ ವೆಚ್ಚ ಕಡಿಮೆಯಾಗುವ ಜೊತೆಗೆ ದೀರ್ಘಕಾಲೀನವಾಗಿ ಮಣ್ಣು ಮತ್ತು ಪರಿಸರ ಸಂರಕ್ಷಣೆ ಸಾಧ್ಯವಾಗಲಿದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಅದೇ ವೇಳೆ ಸ್ಥಳೀಯ ಜಾನುವಾರು ತಳಿಗಳ ಸಂರಕ್ಷಣೆ ಸುಸ್ಥಿರ ಕೃಷಿಯ ಪ್ರಮುಖ ಅಂಶವಾಗಿದ್ದು, ಇದರಿಂದ ರೈತರ ಆದಾಯವನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ ಎಂದು ರಾಜ್ಯಪಾಲರು ಅಭಿಪ್ರಾಯಪಟ್ಟರು.

ಇದನ್ನೂ ಓದಿ….

₹250 ಕೋಟಿ ಅಡಿಕೆ ತೆರಿಗೆ ವಂಚನೆ | ಮೀರತ್‌ನಲ್ಲಿ DGGI ದಾಳಿ, 4 ಮಂದಿ ಬಂಧನ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror