ಕೃಷಿ ವಿಶ್ವವಿದ್ಯಾಲಯಗಳು ನೈಸರ್ಗಿಕ ಕೃಷಿ ಕ್ರಾಂತಿಯನ್ನು ಮುನ್ನಡೆಸಬೇಕು ಹಾಗೂ ಸುಸ್ಥಿರ ಇಳುವರಿಯನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಬೀಜಗಳ ಪುನರುಜ್ಜೀವನಕ್ಕೆ ಒತ್ತು ನೀಡಬೇಕು ಎಂದು ಮಹಾರಾಷ್ಟ್ರ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಅವರು ಕರೆ ನೀಡಿದ್ದಾರೆ.
ಮುಂಬೈನ ಲೋಕಭವನದಿಂದ ವೀಡಿಯೊ ಸಮ್ಮೇಳನದ ಮೂಲಕ ಈಚೆಗೆ ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ರಾಜ್ಯದ ಕೃಷಿ ಹಾಗೂ ಪಶುವೈದ್ಯಕೀಯ ವಿಶ್ವವಿದ್ಯಾಲಯಗಳ ಕುಲಪತಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ದುಬಾರಿ ಹೈಬ್ರಿಡ್ ಬೀಜಗಳು ಮತ್ತು ರಾಸಾಯನಿಕ ಒಳಹರಿವಿನ ಮೇಲಿನ ಅತಿಯಾದ ಅವಲಂಬನೆ ಕಡಿಮೆಯಾಗಬೇಕಾಗಿದೆ ಎಂದು ಒತ್ತಿ ಹೇಳಿದರು. ನೈಸರ್ಗಿಕ ಕೃಷಿಯನ್ನು ಬಲಪಡಿಸುವ ದಿಕ್ಕಿನಲ್ಲಿ ಸ್ಥಳೀಯ ಬೀಜ ಸಂಶೋಧನೆ, ಮಾದರಿ ಸಾಕಣೆ ಕೇಂದ್ರಗಳ ಸ್ಥಾಪನೆ ಹಾಗೂ ರೈತರಿಗೆ ತರಬೇತಿ ಕಾರ್ಯಕ್ರಮಗಳನ್ನು ವಿಸ್ತರಿಸುವ ಅಗತ್ಯವಿದೆ ಎಂದು ಅವರು ಹೇಳಿದರು. ಇದರಿಂದ ರೈತರ ಉತ್ಪಾದನಾ ವೆಚ್ಚ ಕಡಿಮೆಯಾಗುವ ಜೊತೆಗೆ ದೀರ್ಘಕಾಲೀನವಾಗಿ ಮಣ್ಣು ಮತ್ತು ಪರಿಸರ ಸಂರಕ್ಷಣೆ ಸಾಧ್ಯವಾಗಲಿದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಅದೇ ವೇಳೆ ಸ್ಥಳೀಯ ಜಾನುವಾರು ತಳಿಗಳ ಸಂರಕ್ಷಣೆ ಸುಸ್ಥಿರ ಕೃಷಿಯ ಪ್ರಮುಖ ಅಂಶವಾಗಿದ್ದು, ಇದರಿಂದ ರೈತರ ಆದಾಯವನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ ಎಂದು ರಾಜ್ಯಪಾಲರು ಅಭಿಪ್ರಾಯಪಟ್ಟರು.
ಇದನ್ನೂ ಓದಿ….
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…