ಕೃಷಿ ಸಖಿಯರಿಗೆ ನೈಸರ್ಗಿಕ ಕೃಷಿ ತರಬೇತಿ – ಮನುಷ್ಯ ಆರೋಗ್ಯಕ್ಕೆ ನೈಸರ್ಗಿಕ ಕೃಷಿ ಅಗತ್ಯ

November 12, 2025
7:03 AM

ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಆಶ್ರಯದಲ್ಲಿ ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ ಅಡಿಯಲ್ಲಿ ಕೃಷಿ ಸಖಿಯರಿಗೆ “ನೈಸರ್ಗಿಕ ಕೃಷಿ” ಕುರಿತು ಐದು ದಿನಗಳ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಹನುಮಂತಪ್ಪ ಚಾಲನೆ ನೀಡಿದರು.

ಈ ವೇಳೆ ಕೃಷಿ ಇಲಾಖೆ ಜಂಟಿ ನಿರ್ದೇಶಕ ಪ್ರಕಾಶ್ ಆರ್. ಚವ್ಹಾಣ್, ರಾಯಚೂರು ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಪವಾರ್, ಸಾವಯವ ಕೃಷಿ ಸಂಶೋಧನಾ ಸಂಸ್ಥೆ  ಮುಖ್ಯಸ್ಥ ಡಾ.ಎಂ. ಬಸವಣ್ಣೆಪ್ಪ, ಸಹಾಯಕ ಕೃಷಿ ನಿರ್ದೇಶಕ ಸುನೀಲ್ ಕುಮಾರ್ ಮತ್ತು ಕೃಷಿ ಸಖಿಯರು ಉಪಸ್ಥಿತರಿದ್ದರು.  ‌

ಬಳಿಕ ಡಾ.ಹನುಮಂತಪ್ಪ, ಮಣ್ಣಿನ ಆರೋಗ್ಯವೇ ನಮ್ಮ ಆರೋಗ್ಯವಾಗಿದೆ. ಪ್ರಕೃತಿ ಜನ್ಯ ವಸ್ತುಗಳು ನೈಸರ್ಗಿಕ ಕೃಷಿ ಪದ್ಧತಿಗೆ ಆಧಾರವಾಗಿವೆ. ಮಾನವ ಮತ್ತು ಪ್ರಕೃತಿ ಸಮತೋಲನಕ್ಕಾಗಿ ನೈಸರ್ಗಿಕ ಕೃಷಿ ಪದ್ದತಿ ಅಳವಡಿಸಿಕೊಳ್ಳುವುದು ಅತ್ಯಗತ್ಯವಾಗಿದೆ. ಪ್ರಸ್ತುತ ಮಣ್ಣಿನ ಗುಣಧರ್ಮ ನಾಶವಾಗಿದ್ದು, ಸೂಕ್ಷ್ಮಾಣು ಜೀವಿಗಳ ವೃದ್ಧಿಗೆ ಅವಕಾಶ ನೀಡಬೇಕಾಗಿದೆ ಎಂದರು.

ಪ್ರಕಾಶ್ ಚವ್ಹಾಣ್ ಮಾತನಾಡಿ,  ಕೃಷಿ ಇಲಾಖೆ, ಕೃಷಿ ವಿಶ್ವವಿದ್ಯಾಲಯ ಮತ್ತು ರೈತರ ನಡುವೆ ಸಂಪರ್ಕ ಕೊಂಡಿಯಾಗಿ ಸೇವೆ ಸಲ್ಲಿಸುತ್ತಿವೆ.  ನೈಸರ್ಗಿಕ ಕೃಷಿ, ಬೆಳೆ ಸಮೀಕ್ಷೆ ನೋಂದಣಿ, ಕೃಷಿಯಲ್ಲಿ ಪೋಷಕಾಂಶಗಳ ನಿರ್ವಹಣೆ ಸೇರಿದಂತೆ ಎಲ್ಲ ರೀತಿಯ ಸರ್ಕಾರದ ಯೋಜನೆಗಳ ಕುರಿತಂತೆ ರೈತರಿಗೆ ಅರಿವು ಮೂಡಿಸಬೇಕು ಎಂದರು.

ಡಾ.ಎಂ. ಬಸವಣ್ಣೆಪ್ಪ ಮಾತನಾಡಿ, ಕೃಷಿಯಲ್ಲಿ ರಾಸಾಯನಿಕಗಳ ಬಳಕೆಯಿಂದ, ವಾತಾವರಣದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಇದನ್ನು ಕಡಿಮೆ ಮಾಡಿ, ಮಣ್ಣಿನ ಫಲವತ್ತತೆ ಹೆಚ್ಚಳ ಮಾಡುವ ಸಂಬಂಧ, ಕೃಷಿ ಸಖಿಯರಿಗೆ ತರಬೇತಿ ನೀಡುತ್ತಿದ್ದು, ನೈಸರ್ಗಿಕ ಕೃಷಿಯ ಮೂಲ ತತ್ವಗಳನ್ನು ತಿಳಿಸಲಾಗುತ್ತಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ
ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ
October 16, 2026
3:13 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ
October 16, 2026
2:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror