ರಬ್ಬರ್ ಧಾರಣೆಯಲ್ಲಿ ಕೊಂಚ ಏರಿಕೆ ಕಂಡಿದೆ. 142 ರೂಪಾಯಿವರೆಗೆ ಇಳಿಕೆ ಕಂಡಿದ್ದ ರಬ್ಬರ್ ಧಾರಣೆ ಇದೀಗ 150 ರೂಪಾಯಿಗೆ ಏರಿಕೆ ಕಂಡಿದೆ. ಕಳೆದ ಒಂದು ವಾರದಿಂದ ರಬ್ಬರ್ ಧಾರಣೆ ಏರಿಕೆಯ ಹಾದಿಯಲ್ಲಿದೆ.
ಅಂತರಾಷ್ಟ್ರೀಯ ರಬ್ಬರ್ ಮಾರುಕಟ್ಟೆಯಲ್ಲಿ ಕೂಡಾ ಸ್ವಲ್ಪ ಪ್ರಮಾಣದ ಏರಿಕೆಯ ಲಕ್ಷಣ ಇದೆ. 170 ರೂಪಾಯಿ ಆಸುಪಾಸಿಗೆ ತಲಪಿದ್ದ ರಬ್ಬರ್ ಧಾರಣೆ ಬಳಿಕ ಇಳಿಕೆಯಾಗಿತ್ತು. ರಬ್ಬರ್ ಉತ್ಪಾದನೆಯಲ್ಲಿ ಹೆಚ್ಚಳ ಹಾಗೂ ಆಮದು ನೀತಿಯಲ್ಲಿ ಬದಲಾವಣೆ ಭಾರತದ ರಬ್ಬರ್ ಮಾರುಕಟ್ಟೆ ಮೇಲೆ ಪರಿಣಾಮ ಬೀರಿತ್ತು. ಅಂತರಾಷ್ಟ್ರೀಯ ಮಟ್ಟದಲ್ಲಿ ರಬ್ಬರ್ ಇಳುವರಿ ಅಧಿಕವಾಗಿತ್ತು, ಹೀಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿಯೂ ರಬ್ಬರ್ ಧಾರಣೆಯಲ್ಲಿ ಇಳಿಕೆ ಕಂಡಿತ್ತು, ಇದೇ ವೇಳೆ ಭಾರತಕ್ಕೂ ರಬ್ಬರ್ ಆಮದು ಸರಾಗವಾಗಿರುವುದು ಇಲ್ಲಿನ ಮಾರುಕಟ್ಟೆ ಮೇಲೆ ಪರಿಣಾಮ ಬೀರಿತ್ತು. ಈಗ ನಿಧಾನವಾಗಿ ಏರಿಕೆ ಕಾಣುತ್ತಿದೆ.
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…