ಇಂದಿನಿಂದ ‘ನವರಾತ್ರ ನಮಸ್ಯಾ’ | ವೈಭವದೊಂದಿಗೆ ಸಂಪನ್ನವಾದ ರಾಘವೇಶ್ವರ ಶ್ರೀಗಳ ಪುರಪುವೇಶ ಮೆರವಣಿಗೆ

September 22, 2025
7:26 AM

ಸಾಗರದ ರಾಘವೇಶ್ವರ ಸಭಾ ಭವನದಲ್ಲಿ ಸೆ. 22ರಿಂದ ಆರಂಭಗೊಳ್ಳುವ ನವರಾತ್ರ ನಮಸ್ಯಾ ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯವಹಿಸಲು ಶನಿವಾರ ಸಾಗರಕ್ಕೆ ಆಗಮಿಸಿದ ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಪುರ ಪ್ರವೇಶ ಸಾಗರೋಪಾದಿಯಲ್ಲಿ ಸೇರಿದ ಜನಸಮೂಹದ ಮಧ್ಯದಲ್ಲಿ ವೈಭವದಿಂದ ನಡೆಯಿತು.

Advertisement
Advertisement

ನಗರದ ಶಾರದಾಂಬಾ ವೃತ್ತದಿಂದ ಆರಂಭವಾದ ಮೆರವಣಿಗೆಯು ಗಣಪತಿ ದೇವಾಲಯದವರೆಗೆ ನಡೆಯಿತು. ಸುಮಾರು 10 ಸಾವಿರಕ್ಕೂ ಹೆಚ್ಚು ಶಿಷ್ಯ ಭಕ್ತರು ಸುಮಾರು 1.5 ಕಿಮೀ ಉದ್ದದ ಮೆರವಣಿಗೆಯಲ್ಲಿ ಭವ್ಯವಾಗಿ ನಡೆಯಿತು. 2 ಸಾವಿರ ಮಾತೆಯರು ಪೂರ್ಣಕುಂಭದೊಂದಿಗೆ ಶ್ರೀಗಳವರ ಸ್ವಾಗತಿಸಿದರು. ಚಂಡೆ ವಾದನ, ನಾದಸ್ವರ, ಭಜನಾ ಕುಣಿತ, ರಾಮ ಸಂಕೀರ್ತನೆ ಸೇರಿದಂತೆ ಹತ್ತಕ್ಕೂ ಹೆಚ್ಚು ಕಲಾತಂಡಗಳು ಹಾಗೂ ಸುಮಾರು 15 ಅಡಿ ಎತ್ತರದ ಧನುರ್ಧಾರಿ ರಾಮನ ಮೂರ್ತಿ ಮೆರವಣಿಗೆಯ ಸೊಬಗನ್ನು ಹೆಚ್ಚಿಸಿತ್ತು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಆರಂಭದಲ್ಲಿ ಶ್ರೀ ಶಾರದಾ ದೇವಿಗೆ ಪೂಜಿಸಿ, ವಿಶೇಷವಾಗಿ ಅಲಂಕರಿಸಿದ ರಥಾರೋಹಣ ಗೈದ ಶ್ರೀಗಳವರಿಗೆ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೆಳೆಯೂರು, ಮಾಜಿ ಸಚಿವ ಹರತಾಳು ಹಾಲಪ್ಪ, ಶಿಮೂಲ್ ಅಧ್ಯಕ್ಷ ವಿದ್ಯಾಧರ ಫಲ ಸಮರ್ಪಿಸಿದರು. ವಿವಿಧ ಸಮಾಜಗಳ ಮುಖಂಡರು ಭಾಗವಹಿಸಿದ್ದರು.

ಶೋಭಾಯಾತ್ರೆಯ ನಂತರ ಮಾತನಾಡಿದ ಶ್ರೀಗಳು, ಸಾಗರ ನಗರಕ್ಕೆ ಸಾಗರ ಎಂಬ ಹೆಸರು ಸಲ್ಲುವುದು ಹೇಗೆ ಎಂಬ ಪ್ರಶ್ನೆಯಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ. ಪುರಪ್ರವೇಶದ ಸಂದರ್ಭದಲ್ಲಿ ಭಕ್ತಿ ಸಾಗರವಾಗಿ ಹೊಮ್ಮಿದೆ. ಸಾಗರಕ್ಕೆ ಸಾಗರವೇ ಹೋಲಿಕೆ, ಆಕಾಶಕ್ಕೆ ಆಕಾಶವೇ ಹೋಲಿಕೆ, ರಾಮ-ರಾವಣ ಯುದ್ಧಕ್ಕೆ ಆ ಯುದ್ಧವೇ ಹೋಲಿಕೆ ಎಂದು ವಾಲ್ಮೀಕಿ ಮಹರ್ಷಿ ಹೇಳುತ್ತಾರೆ. ಸಾಗರ ನಗರದಲ್ಲಿ ನಡೆದ ಪುರಪ್ರವೇಶ ಉತ್ಸವಕ್ಕೆ ಬೇರೆ ಹೋಲಿಕೆ ಇಲ್ಲ. ಇವೆಲ್ಲ ವೈಭವಗಳು ರಾಜರಾಜೇಶ್ವರಿಗೆ ಸಲ್ಲುತ್ತದೆ ಎಂದರು.

ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಸಾಗರದಲ್ಲಿ ದೇವಿಯ ಆರಾಧನೆ ನಡೆಯುತ್ತಿರುವುದು ನಮ್ಮೆಲ್ಲರ ಸೌಭಾಗ್ಯವಾಗಿದೆ. ಶಾಸಕನಾಗಿ ಹಾಗೂ ಮಠದ ಭಕ್ತನಾಗಿ ಕಾರ್ಯಕ್ರಮಕ್ಕೆ ಅಗತ್ಯವಾದ ಎಲ್ಲಾ ಸಹಕಾರ ನೀಡುತ್ತೇನೆ ಎಂದರು.

ನವರಾತ್ರ ನಮಸ್ಯಾ: ಸೋಮವಾರದಿಂದ ಪ್ರತಿದಿನ ಮಧ್ಯಾಹ್ನ ಶ್ರೀಗಳಿಂದ ಲಲಿತೋಪಾಖ್ಯಾನ ವಿಶೇಷ ಪ್ರವಚನ ಇರಲಿದ್ದು, ಬೆಳಗ್ಗೆ ಶ್ರೀಪೂಜೆ, ಲಲಿತಾಮೂರ್ತಿ ಪೂಜೆ, ಚಂಡಿಕಾ ಹವನ, ಚಂಡೀ ಸಪ್ತಶತಿ ಪಾರಾಯಣ, ಕುಂಕುಮಾರ್ಚನೆ, ಭಜನೆ, ಸುವಾಸಿನಿ ಪೂಜೆ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ
January 29, 2026
2:18 PM
by: ದ ರೂರಲ್ ಮಿರರ್.ಕಾಂ
ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!
January 29, 2026
7:39 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ
January 29, 2026
7:18 AM
by: ದ ರೂರಲ್ ಮಿರರ್.ಕಾಂ
ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ
January 29, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror