ಸಾಗರದ ರಾಘವೇಶ್ವರ ಸಭಾ ಭವನದಲ್ಲಿ ಸೆ. 22ರಿಂದ ಆರಂಭಗೊಳ್ಳುವ ನವರಾತ್ರ ನಮಸ್ಯಾ ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯವಹಿಸಲು ಶನಿವಾರ ಸಾಗರಕ್ಕೆ ಆಗಮಿಸಿದ ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಪುರ ಪ್ರವೇಶ ಸಾಗರೋಪಾದಿಯಲ್ಲಿ ಸೇರಿದ ಜನಸಮೂಹದ ಮಧ್ಯದಲ್ಲಿ ವೈಭವದಿಂದ ನಡೆಯಿತು.
ನಗರದ ಶಾರದಾಂಬಾ ವೃತ್ತದಿಂದ ಆರಂಭವಾದ ಮೆರವಣಿಗೆಯು ಗಣಪತಿ ದೇವಾಲಯದವರೆಗೆ ನಡೆಯಿತು. ಸುಮಾರು 10 ಸಾವಿರಕ್ಕೂ ಹೆಚ್ಚು ಶಿಷ್ಯ ಭಕ್ತರು ಸುಮಾರು 1.5 ಕಿಮೀ ಉದ್ದದ ಮೆರವಣಿಗೆಯಲ್ಲಿ ಭವ್ಯವಾಗಿ ನಡೆಯಿತು. 2 ಸಾವಿರ ಮಾತೆಯರು ಪೂರ್ಣಕುಂಭದೊಂದಿಗೆ ಶ್ರೀಗಳವರ ಸ್ವಾಗತಿಸಿದರು. ಚಂಡೆ ವಾದನ, ನಾದಸ್ವರ, ಭಜನಾ ಕುಣಿತ, ರಾಮ ಸಂಕೀರ್ತನೆ ಸೇರಿದಂತೆ ಹತ್ತಕ್ಕೂ ಹೆಚ್ಚು ಕಲಾತಂಡಗಳು ಹಾಗೂ ಸುಮಾರು 15 ಅಡಿ ಎತ್ತರದ ಧನುರ್ಧಾರಿ ರಾಮನ ಮೂರ್ತಿ ಮೆರವಣಿಗೆಯ ಸೊಬಗನ್ನು ಹೆಚ್ಚಿಸಿತ್ತು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಆರಂಭದಲ್ಲಿ
ಶೋಭಾಯಾತ್ರೆಯ ನಂತರ ಮಾತನಾಡಿದ ಶ್ರೀಗಳು, ಸಾಗರ ನಗರಕ್ಕೆ ಸಾಗರ ಎಂಬ ಹೆಸರು ಸಲ್ಲುವುದು ಹೇಗೆ ಎಂಬ ಪ್ರಶ್ನೆಯಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ. ಪುರಪ್ರವೇಶದ ಸಂದರ್ಭದಲ್ಲಿ ಭಕ್ತಿ ಸಾಗರವಾಗಿ ಹೊಮ್ಮಿದೆ. ಸಾಗರಕ್ಕೆ ಸಾಗರವೇ ಹೋಲಿಕೆ, ಆಕಾಶಕ್ಕೆ ಆಕಾಶವೇ ಹೋಲಿಕೆ, ರಾಮ-ರಾವಣ ಯುದ್ಧಕ್ಕೆ ಆ ಯುದ್ಧವೇ ಹೋಲಿಕೆ ಎಂದು ವಾಲ್ಮೀಕಿ ಮಹರ್ಷಿ ಹೇಳುತ್ತಾರೆ. ಸಾಗರ ನಗರದಲ್ಲಿ ನಡೆದ ಪುರಪ್ರವೇಶ ಉತ್ಸವಕ್ಕೆ ಬೇರೆ ಹೋಲಿಕೆ ಇಲ್ಲ. ಇವೆಲ್ಲ ವೈಭವಗಳು ರಾಜರಾಜೇಶ್ವರಿಗೆ ಸಲ್ಲುತ್ತದೆ ಎಂದರು.
ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಸಾಗರದಲ್ಲಿ ದೇವಿಯ ಆರಾಧನೆ ನಡೆಯುತ್ತಿರುವುದು ನಮ್ಮೆಲ್ಲರ ಸೌಭಾಗ್ಯವಾಗಿದೆ. ಶಾಸಕನಾಗಿ ಹಾಗೂ ಮಠದ ಭಕ್ತನಾಗಿ ಕಾರ್ಯಕ್ರಮಕ್ಕೆ ಅಗತ್ಯವಾದ ಎಲ್ಲಾ ಸಹಕಾರ ನೀಡುತ್ತೇನೆ ಎಂದರು.
ನವರಾತ್ರ ನಮಸ್ಯಾ: ಸೋಮವಾರದಿಂದ ಪ್ರತಿದಿನ ಮಧ್ಯಾಹ್ನ ಶ್ರೀಗಳಿಂದ ಲಲಿತೋಪಾಖ್ಯಾನ ವಿಶೇಷ ಪ್ರವಚನ ಇರಲಿದ್ದು, ಬೆಳಗ್ಗೆ ಶ್ರೀಪೂಜೆ, ಲಲಿತಾಮೂರ್ತಿ ಪೂಜೆ, ಚಂಡಿಕಾ ಹವನ, ಚಂಡೀ ಸಪ್ತಶತಿ ಪಾರಾಯಣ, ಕುಂಕುಮಾರ್ಚನೆ, ಭಜನೆ, ಸುವಾಸಿನಿ ಪೂಜೆ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಕ್ಯಾನ್ಸರ್ ಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡ ನಂತರವೂ ವರ್ಷಗಳ ಬಳಿಕ ಮತ್ತೆ ರೋಗ ಕಾಣಿಸಿಕೊಳ್ಳುವುದಕ್ಕೆ…
ಪ್ರಕೃತಿಯಲ್ಲಿ ಇರುವ ಡಿಎನ್‌ಎ, ಪ್ರೋಟೀನ್‌ಗಳಂತೆ ಪ್ಲಾಸ್ಟಿಕ್‌ಗಳನ್ನೂ ಕೂಡಾ ನಿಗದಿತ ಅವಧಿಯಲ್ಲಿ ಸ್ವಯಂ ಕರಗುವಂತೆ…
2026ರಲ್ಲಿ ಕೃಷಿ ಕ್ಷೇತ್ರ ಸ್ಥಿರಗೊಳ್ಳುವ ನಿರೀಕ್ಷೆಯಿದ್ದರೂ, ವಿವಿಧ ಬೆಳೆಗಳ ನಡುವೆ ಅಸಮಾನ ಸ್ಥಿತಿಗಳು…
ವಿಶ್ವಾದ್ಯಂತ ಶಾಖದ ಅಲೆಗಳು ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ಮ್ಯಾಸಚೂಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT)…
ಗ್ರಾಮೀಣ ವಿದ್ಯುದ್ದೀಕರಣವನ್ನು ಬಲಪಡಿಸಲು ಮತ್ತು ಸಾರ್ವಜನಿಕ ಉಪಯುಕ್ತತೆ ಮೂಲಸೌಕರ್ಯಕ್ಕಾಗಿ ಭೂಮಿಯನ್ನು ಬಳಸಿದ ರೈತರಿಗೆ…
ದೇಹದಲ್ಲಿ ರಕ್ತದೊತ್ತಡ ಹೆಚ್ಚಾಗಿ ಬಿಟ್ಟರೆ ಅಂದರೆ ನಿಯಂತ್ರಣ ತಪ್ಪಿದರೆ ವಿವಿಧ ಸಮಸ್ಯೆ ಉಂಟಾಗುತ್ತದೆ. ಮನುಷ್ಯನ…