ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ನವಿಲುತೀರ್ಥ ಇಂದಿರಾಗಾಂಧಿ ಜಲಾಶಯ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಮಲಪ್ರಭಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಾಗಿನ ಅರ್ಪಿಸಿದರು.…..ಮುಂದೆ ಓದಿ….
ಬಳಿಕ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಈ ವರ್ಷ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ನವಿಲುತೀರ್ಥ ಇಂದಿರಾಗಾಂಧಿ ಜಲಾಶಯವೂ ಪೂರ್ಣ ಭರ್ತಿಯಾಗಿದೆ. 37.7 ಟಿಎಂಸಿ ನೀರಿನ ಸಂಗ್ರಹಣಾ ಸಾಮರ್ಥ್ಯ ಹೊಂದಿದ್ದು, 2 ಸಾವಿರದ 79 ಅಡಿ ಆಳ ಹೊಂದಿದೆ. ಮಲಪ್ರಭಾ ನದಿ ಉತ್ತರ ಕರ್ನಾಟಕದ ಜೀವನಾಡಿಯಾಗಿದ್ದು, ಈ ಭಾಗದ ಜಲಾಶಯಗಳು ಭರ್ತಿಯಾಗಿರುವ ಹಿನ್ನೆಲೆಯಲ್ಲಿ ರೈತರ ಕೃಷಿ ಚಟುವಟಿಕೆಗಳು, ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆಗೆ ಸಹಕಾರಿಯಾಗಿದೆ ಎಂದು ಹೇಳಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel