ಚಿಕ್ಕಮಗಳೂರಿನ ಜಿಲ್ಲೆಯ ಕೊಪ್ಪ, ಜಯಪುರ, ಶೃಂಗೇರಿ, ಕುದುರೆಮುಖ ವ್ಯಾಪ್ತಿಯಲ್ಲಿ ನಕ್ಸಲ್ ನಿಗ್ರಹ ಪಡೆ ಹಾಗು ಪೊಲೀಸ್ ಇಲಾಖೆ ವತಿಯಿಂದ ಕಾರ್ಯಾಚರಣೆ ತೀವ್ರಗೊಂಡಿದೆ. ಕೊಪ್ಪ ತಾಲೂಕಿನ ಕಡೆಗುಂದಿ ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಇತ್ತೀಚೆಗೆ ಲತಾ ಹಾಗೂ ಜಯಣ್ಣ ಎಂಬ ನಾಲ್ವರು ನಕ್ಸಲರ ತಂಡ ಭೇಟಿ ನೀಡಿದ್ದು, ಈ ಬಗ್ಗೆ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಕ್ಸಲರು ಭೇಟಿ ನೀಡಿ ಹೋದ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ಪಡೆಯ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಹಾಗು ಹಿರಿಯ ಪೊಲೀಸ್ ಅಧಿಕಾರಿಗಳು ಮೊಕ್ಕಾಂ ಹೂಡಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗ್ರಾಮಗಳ ಸುತ್ತ ಮುತ್ತ ಭದ್ರತೆ ಹೆಚಿಸಲಾಗಿದ್ದು ಸೂಕ್ಷ್ಮ ಸ್ಥಳಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಿ ವಾಹನ ತಪಾಸಣೆ ಮಾಡಲಾಗುತ್ತಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel