ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರಿದ  ನಕ್ಸಲ್ ಕೂಂಬಿಂಗ್ ಕಾರ್ಯಚರಣೆ | ನಕ್ಸಲರಿಗೆ ಶರಣಾಗುವಂತೆ ಸರ್ಕಾರ ಸೂಚನೆ |

December 1, 2024
12:14 PM

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಕ್ಸಲ್ ಕೂಂಬಿಂಗ್ ಕಾರ್ಯಚರಣೆ ಮುಂದುವರೆಸಲಾಗಿದೆ. ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಗ್ಗಾ, ಕೆರೆಕಟ್ಟೆ. ಸುತ್ತಿನಗುಡ್ಡ ಹಾಗು ಕುದುರೆಮುಖ ಅರಣ್ಯ ವ್ಯಾಪ್ತಿಯಲ್ಲಿ ನಕ್ಸಲ್ ನಿಗ್ರಹ ಪಡೆಯಿಂದ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ. ಜಿಲ್ಲೆಯ ಗಡಿಯಂಚಿನ ಚೆಕ್ ಪೋಸ್ಟ್‌ಗಳಲ್ಲಿ ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ಉಡುಪಿ, ದಕ್ಷಿಣ ಕನ್ನಡ,  ಶಿವಮೊಗ್ಗ ಜಿಲ್ಲೆಗಳ ಅರಣ್ಯ ವ್ಯಾಪ್ತಿಗಳಲ್ಲಿ ನಕ್ಸಲರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಕಳೆದ ವಾರ ನಕ್ಸಲ್ ವಿಕ್ರಂಗೌಡ ಎನ್‌ಕೌಂಟರ್ ಬಳಿಕ ಸುಮಾರು 3 ಮಂದಿ ನಕ್ಸಲರು ಅರಣ್ಯದಲ್ಲಿ ತಪ್ಪಿಸಿಕೊಂಡಿದ್ದಾರೆ. ಮುಂಡಗಾರು ಲತಾ, ಜಯಣ್ಣ, ವನಜಾಕ್ಷಿ ತಂಡ ಕಾಡಿನಲ್ಲಿ ಇರುವ ಅನುಮಾನವಿದ್ದು ಕೂಂಬಿಂಗ್ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಕ್ಸಲರಿಗೆ ಶರಣಾಗುವಂತೆ ಸರ್ಕಾರ ಸೂಚನೆ : ನಕ್ಸಲ್ ನಾಯಕ ವಿಕ್ರಂ ಗೌಡನ ಹತ್ಯೆ ಬಳಿಕ  ಆತನ ಸಹಚರರಿಗೆ ಸಮಾಜದ ಮುಖ್ಯವಾಹಿನಿಗೆ ಬರಲು ಶರಣಾಗಲು ಸರ್ಕಾರ ಅವಕಾಶ ನೀಡಿದೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್ ನಕ್ಸಲರು ತಮ್ಮ ನಿಲುವು ಬದಲಿಸುವುದು ಒಳಿತು ಎಂದು ಅಭಿಪ್ರಾಯಪಟ್ಟಿದ್ದಾರೆ. ಶರಣಾಗುವ ನಕ್ಸಲರಿಗೆ ಸರ್ಕಾರ ಪ್ಯಾಕೇಜ್ ಘೋಷಣೆ ಮಾಡಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ
August 25, 2026
10:30 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ
August 25, 2026
8:54 PM
by: ದ ರೂರಲ್ ಮಿರರ್.ಕಾಂ
ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ
August 25, 2026
1:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror