ಚಿಕ್ಕಮಗಳೂರು ಜಿಲ್ಲೆಯಲ್ಲಿ ನಕ್ಸಲ್ ಕೂಂಬಿಂಗ್ ಕಾರ್ಯಚರಣೆ ಮುಂದುವರೆಸಲಾಗಿದೆ. ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಗ್ಗಾ, ಕೆರೆಕಟ್ಟೆ. ಸುತ್ತಿನಗುಡ್ಡ ಹಾಗು ಕುದುರೆಮುಖ ಅರಣ್ಯ ವ್ಯಾಪ್ತಿಯಲ್ಲಿ ನಕ್ಸಲ್ ನಿಗ್ರಹ ಪಡೆಯಿಂದ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ. ಜಿಲ್ಲೆಯ ಗಡಿಯಂಚಿನ ಚೆಕ್ ಪೋಸ್ಟ್‌ಗಳಲ್ಲಿ ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳ ಅರಣ್ಯ ವ್ಯಾಪ್ತಿಗಳಲ್ಲಿ ನಕ್ಸಲರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಕಳೆದ ವಾರ ನಕ್ಸಲ್ ವಿಕ್ರಂಗೌಡ ಎನ್‌ಕೌಂಟರ್ ಬಳಿಕ ಸುಮಾರು 3 ಮಂದಿ ನಕ್ಸಲರು ಅರಣ್ಯದಲ್ಲಿ ತಪ್ಪಿಸಿಕೊಂಡಿದ್ದಾರೆ. ಮುಂಡಗಾರು ಲತಾ, ಜಯಣ್ಣ, ವನಜಾಕ್ಷಿ ತಂಡ ಕಾಡಿನಲ್ಲಿ ಇರುವ ಅನುಮಾನವಿದ್ದು ಕೂಂಬಿಂಗ್ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಕ್ಸಲರಿಗೆ ಶರಣಾಗುವಂತೆ ಸರ್ಕಾರ ಸೂಚನೆ : ನಕ್ಸಲ್ ನಾಯಕ ವಿಕ್ರಂ ಗೌಡನ ಹತ್ಯೆ ಬಳಿಕ ಆತನ ಸಹಚರರಿಗೆ ಸಮಾಜದ ಮುಖ್ಯವಾಹಿನಿಗೆ ಬರಲು ಶರಣಾಗಲು ಸರ್ಕಾರ ಅವಕಾಶ ನೀಡಿದೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್ ನಕ್ಸಲರು ತಮ್ಮ ನಿಲುವು ಬದಲಿಸುವುದು ಒಳಿತು ಎಂದು ಅಭಿಪ್ರಾಯಪಟ್ಟಿದ್ದಾರೆ. ಶರಣಾಗುವ ನಕ್ಸಲರಿಗೆ ಸರ್ಕಾರ ಪ್ಯಾಕೇಜ್ ಘೋಷಣೆ ಮಾಡಿದೆ ಎಂದು ತಿಳಿಸಿದ್ದಾರೆ.
ಬಂಗಾಳಕೊಲ್ಲಿಯ ಪಾಂಡಿಚೇರಿ ಕರಾವಳಿಯಲ್ಲಿ ಬೀಡುಬಿಟ್ಟಿರುವ ಫೆಂಗಲ್ ಚಂಡಮಾರುತವು ದಿನ ಕಳೆದಂತೆ ದುರ್ಬಲಗೊಳ್ಳುತ್ತಿದ್ದು, ಡಿಸೆಂಬರ್…
ಬಳ್ಳಾರಿ ಜಿಲ್ಲೆಯ ಕಂಪ್ಲಿ ಮತ್ತು ಸಿರುಗುಪ್ಪ ತಾಲ್ಲೂಕುಗಳಲ್ಲಿ ಖಾಸಗಿ ಭತ್ತ ಕಟಾವು ಯಂತ್ರಗಳ…
ಫೆಂಗಲ್ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು…
ರಾಜ್ಯದಲ್ಲಿ ಡಿಸೆಂಬರ್ 2 ರಿಂದ ಡಿಸೆಂಬರ್ 4 ರ ತನಕ ದಕ್ಷಿಣ ಒಳನಾಡು,…
ಕೃಷಿ ಹೊರತುಪಡಿಸಿ, ವಾಣಿಜ್ಯ, ಕೈಗಾರಿಕೆ ಹಾಗೂ ಗಣಿಗಾರಿಕೆ ಸಂಬಂಧಿಸಿದ ಸ್ಥಳಗಳಲ್ಲಿ ಕೊಳವೆ ಬಾವಿ…
5G ಮತ್ತು 6G ಮೊಬೈಲ್ ಸಂವಹನಕ್ಕಾಗಿ ಸಕ್ರಿಯ ಮತ್ತು ನಿಷ್ಕ್ರಿಯ ಆಂಟೆನಾ ವ್ಯವಸ್ಥೆಗಳಲ್ಲಿ…