Advertisement
MIRROR FOCUS

ನಕ್ಸಲರ ಶರಣಾಗತಿ ಹಿನ್ನೆಲೆ | ಶಸ್ತ್ರಾಸ್ತ್ರಗಳ ಬಗ್ಗೆ ಪೊಲೀಸ್ ಇಲಾಖೆಯಿಂದ ತನಿಖೆ

Share

ರಾಜ್ಯದಲ್ಲಿ ಶರಣಾದ ನಕ್ಸಲರನ್ನು  ರಾಷ್ಟ್ರೀಯ ತನಿಖಾ ಸಂಸ್ಥೆ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.  ಈ ನಡುವೆ ಶರಣಾದ ಮಾವೋವಾದಿಗಳ ತನಿಖೆಗಾಗಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ವಿಭಾಗದ ಉಪ ಪೊಲೀಸ್ ವರಿಷ್ಠಾಧಕಾರಿ ಬಾಲಾಜಿ ಸಿಂಗ್ ಅವರನ್ನು ನಿಯೋಜಿಸಲಾಗಿದೆ.

ಸರ್ಕಾರದ ಮುಂದೆ ಶರಣಾದಾಗ ನಕ್ಸಲರು ಶಸ್ತಾಸ್ತ್ರಗಳನ್ನು ತ್ಯಜಿಸಿರಲಿಲ್ಲ. ಸಾಂಕೇತಿಕವಾಗಿ ಶರಣಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಇಂದು ಅವರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಿದ್ದಾರೆ.  ಮುಂಡಗಾರು ಲತಾ, 85 ಪ್ರಕರಣಗಳನ್ನು ಎದುರಿಸುತ್ತಿದ್ದು, ಸುಂದರಿ 71, ಮಾರಪ್ಪ ಅರೋಲಿ 50, ವನಜಾಕ್ಷಿ 29, ವಸಂತ 8 ಮತ್ತು ಜೀಶಾ 11 ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ನಕ್ಸಲರ ಶರಣಾಗತಿ ಮತ್ತು ಪುನರ್ವಸತಿ ಯೋಜನೆ ಅಡಿಯಲ್ಲಿ ಪ್ರತಿಯೊಬ್ಬರಿಗೆ ಮೂರು ಲಕ್ಷ ರೂಪಾಯಿ ಬಿಡುಗಡೆ ಮಾಡಲು ಚಿಕ್ಕಮಗಳೂರು ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿ ಆದೇಶಿಸಿದೆ.

ನಕ್ಸಲರು ಮುಖ್ಯಮಂತ್ರಿಯವರ ಕಚೇರಿಗೆ ಬಂದು ಶರಣಾಗಿರುವುದರಲ್ಲಿ ತಪ್ಪೇನಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ನಕ್ಸಲರ ಮನ ಪರಿವರ್ತನೆಗೆ ಸರ್ಕಾರ ಅವಕಾಶ ಕೊಟ್ಟಿದೆ. ನಕ್ಸಲರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಸರ್ಕಾರದ ಮುಂದೆ ಶರಣಾಗಿದ್ದಾರೆ. ಶಸ್ತ್ರಾಸ್ತ್ರಗಳನ್ನು ಎಲ್ಲಿ ಎಸೆದು ಬಂದಿದ್ದಾರೆ ಎಂಬುದರ ಕುರಿತು ಪೊಲೀಸ್ ಇಲಾಖೆಯಿಂದ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಇದೇ ವೇಳೆ ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ ಎಂದು ಹೇಳಿದ್ದಾರೆ. ಪರಿಶಿಷ್ಟ ಸಮುದಾಯದ ಸಮಾವೇಶದ ಕುರಿತು ಕರೆದಿದ್ದ ಸಭೆ ಮುಂದೂಡಲು ಅನೇಕ ಕಾರಣಗಳಿವೆ ಎಂದು ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

22 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

23 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

23 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

1 day ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

2 days ago