ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಗುರುವಾರ ಬಿಡುಗಡೆ ಮಾಡಿದ ಅಡಿಪಾಯ ಹಂತದ ಶಿಕ್ಷಣಕ್ಕಾಗಿ ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟು (National Curriculum Framework-NCF) ಎಂಟು ವರ್ಷ ವಯಸ್ಸಿನವರೆಗಿನ ಮಕ್ಕಳಿಗೆ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಮಾತೃಭಾಷೆಯನ್ನು ಪ್ರಾಥಮಿಕ ಶಿಕ್ಷಣ ಮಾಧ್ಯಮವಾಗಿಸಬೇಕು ಎಂದು ಶಿಫಾರಸು ಮಾಡಿದೆ.
ಮಕ್ಕಳಿಗೆ ಹೊಸ ಭಾಷೆಯು ಆರಂಭಿಕ ವರ್ಷಗಳಲ್ಲಿ ಸಂಪೂರ್ಣ ಕಲಿಕೆಯ ಪ್ರಕ್ರಿಯೆಯನ್ನು ಹಿಮ್ಮುಖಗೊಳಿಸುತ್ತದೆ. ಇಂಗ್ಲಿಷ್ ಎರಡನೇ ಭಾಷೆಯ ಆಯ್ಕೆಯಾಗಿ ಬಳಸಬಹುದು ಎಂದು ಇದೇ ವೇಳೆ ತಿಳಿಸಲಾಗಿದೆ.
ಮಗುವಿಗೆ ಹೊಸ ಅಥವಾ ಅಪರಿಚಿತ ಭಾಷೆಯನ್ನು ಬೋಧನಾ ಮಾಧ್ಯಮವಾಗಿ ಕಲಿಸಿದರೆ, ಅದು ಮಗುವಿನ ಮೇಲೆ ಪರಿಣಾಮ ಬೀರುತ್ತದೆ. ಹೊಸ ಭಾಷೆ ಕಲಿಕೆಯು ಮಕ್ಕಳ ಸಂಪೂರ್ಣ ಕಲಿಕೆಯ ಪ್ರಕ್ರಿಯೆಯನ್ನು ಹಿಮ್ಮುಖಗೊಳಿಸುತ್ತದೆ’ ಎನ್ನಲಾಗಿದೆ.
‘ಮಕ್ಕಳು ತಮ್ಮ ಮನೆ ಭಾಷೆಯಲ್ಲಿ ಪರಿಕಲ್ಪನೆಗಳನ್ನು ಅತ್ಯಂತ ವೇಗವಾಗಿ ಮತ್ತು ಆಳವಾಗಿ ಕಲಿಯುವುದರಿಂದ, ಮೂಲಭೂತ ಹಂತದಲ್ಲಿ ಮಗುವಿನ ಮನೆ ಭಾಷೆ / ಮಾತೃಭಾಷೆ / ಪರಿಚಿತ ಭಾಷೆ ಬೋಧನೆಯ ಪ್ರಾಥಮಿಕ ಮಾಧ್ಯಮವಾಗಿದೆ. ಇದು ಸಾರ್ವಜನಿಕ ಮತ್ತು ಖಾಸಗಿ ಶಾಲೆಗಳಲ್ಲಿ ವಿಧಾನವಾಗಿರಬೇಕು ‘ಎಂದು ಹೇಳಿಕೆ ತಿಳಿಸಿದೆ.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…