Advertisement
MIRROR FOCUS

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

Share

ಪ್ರಕೃತಿ ವಿಕೋಪಗಳಿಂದ ಅಡಿಕೆ ತೋಟಗಳಿಗೆ ಆಗುತ್ತಿರುವ ಭಾರೀ ನಷ್ಟಕ್ಕೆ ಹೋಲಿಸಿದರೆ ಎನ್‌ಡಿಆರ್‌ಎಫ್ (NDRF) ಮಾರ್ಗಸೂಚಿಯಡಿ ನೀಡಲಾಗುತ್ತಿರುವ ಪರಿಹಾರ ಮೊತ್ತ ಅತ್ಯಂತ ಕಡಿಮೆ ಎಂಬ ಅಸಮಾಧಾನ ರೈತ ವಲಯದಲ್ಲಿ ಈಗ ಚರ್ಚೆಯಾಗುತ್ತಿದೆ.

ಪ್ರಸ್ತುತ ನಿಯಮಗಳ ಪ್ರಕಾರ ಅಡಿಕೆ ತೋಟಗಳಿಗೆ ಪ್ರತಿ ಹೆಕ್ಟೇರ್‌ಗೆ ನೀಡುವ ಪರಿಹಾರ ಮೊತ್ತ ಬೆಳೆ ಸ್ಥಾಪನೆ ಮತ್ತು ನಿರ್ವಹಣೆಗೆ ಆಗುವ ನೈಜ ವೆಚ್ಚಕ್ಕೆ ಹೋಲಿಸಿದರೆ ಸಾಕಾಗುತ್ತಿಲ್ಲ ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ. ಸದ್ಯ ಗಾಳಿಗೆ, ಪ್ರಕೃತಿ ವಿಕೋಪಕ್ಕೆ ಅಡಿಕೆ ಮರ ನಾಶವಾದರೆ ಒಂದು ಮರಕ್ಕೆ 18 ರೂಪಾಯಿ ನೀಡಲಾಗುತ್ತದೆ, ಅದೇ ವಿದ್ಯುತ್‌ ಕಂಬಕ್ಕೆ 5 ಸಾವಿರ ರೂಪಾಯಿ ನೀಡಲಾಗುತ್ತದೆ ಎನ್ನುವುದು ಚರ್ಚೆಯ ವಿಷಯ.

ರೈತರ ಅಭಿಪ್ರಾಯದಂತೆ, ಅಡಿಕೆ ತೋಟ ಸ್ಥಾಪನೆಗೆ ಲಕ್ಷಾಂತರ ರೂಪಾಯಿ ಹೂಡಿಕೆ ಅಗತ್ಯವಿದ್ದು, ಗಾಳಿ, ಮಳೆ, ಭೂಕುಸಿತ ಹಾಗೂ ಪ್ರವಾಹದಿಂದ ಸಂಪೂರ್ಣ ತೋಟ ಹಾನಿಯಾದರೂ ಸಿಗುವ ಪರಿಹಾರದಿಂದ ನಷ್ಟ ಭರಿಸಲಾಗುವುದಿಲ್ಲ. ಹೀಗಾಗಿ ಅಡಿಕೆ ಸೇರಿದಂತೆ ತೋಟಗಾರಿಕಾ ಬೆಳೆಗಳಿಗೆ ಪ್ರತ್ಯೇಕ ಹಾಗೂ ವಾಸ್ತವಿಕ ಪರಿಹಾರ ಮಾನದಂಡ ರೂಪಿಸುವಂತೆ ಆಗ್ರಹಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ತಜ್ಞರ ಅಭಿಪ್ರಾಯದಂತೆ, ತೋಟಗಾರಿಕಾ ಬೆಳೆಗಳ ಉತ್ಪಾದನಾ ವೆಚ್ಚ, ಬೆಳೆಯ ವಯಸ್ಸು, ಆದಾಯ ನಷ್ಟ ಹಾಗೂ ಮರುನೆಡುವ ವೆಚ್ಚವನ್ನು ಪರಿಗಣಿಸಿ ಪರಿಹಾರ ನಿಗದಿಪಡಿಸಿದರೆ ಮಾತ್ರ ರೈತರಿಗೆ ನ್ಯಾಯ ಸಿಗಲಿದೆ.

Farmers have expressed concern that the compensation provided under NDRF norms for arecanut crop losses due to natural disasters is far below the actual investment and damage incurred. They have demanded a revision of compensation norms for plantation crops.

ನಿಮ್ಮ ಅಭಿಪ್ರಾಯ, ಪ್ರತಿಕ್ರಿಯೆಗಳನ್ನು ಕಮೆಂಟ್‌ ಮೂಲಕ ತಿಳಿಸಿ…
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

9 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

1 day ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

2 days ago