ವೈದ್ಯಕೀಯ ವೃತ್ತಿ ಕೋರ್ಸ್‍ಗಳಿಗೆ ಪ್ರವೇಶ ಕಲ್ಪಿಸುವ ರಾಷ್ಟ್ರಮಟ್ಟದ, ನೀಟ್-2020 ಪರೀಕ್ಷೆಯಲ್ಲಿ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ದಾಖಲೆಯ ಫಲಿತಾಂಶ ಪಡೆದಿದ್ದಾರೆ.
ವಿದ್ಯಾರ್ಥಿಯಾದ ಶ್ರೀಹರಿ ಎಸ್ 627 ಅಂಕಗಳೊಂದಿಗೆ 4792ನೇ ರ್ಯಾಂಕ್ ಗಳಿಸಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾನೆ. ಸುಮಾರು 14.3 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ ಈ ಸಾಧನೆ ಗಮನಾರ್ಹವಾಗಿದೆ.
ಉಳಿದಂತೆ ವಿದ್ಯಾರ್ಥಿಗಳಾದ ಶ್ರೀಜಿತ್ ಎಂ (539 ಅಂಕ), ನದೀಂ ಡಿ ಕೆ (533 ಅಂಕ), ಸ್ಪೂರ್ತಿ ಸಾಲ್ಯಾನ್ (520 ಅಂಕ), ದೀಕ್ಷಾ ಡಿ ಎಸ್ (520 ಅಂಕ), ಆದರ್ಶ್ ಎಂ (517 ಅಂಕ), ಅಭಿಷೇಕ್ ಭಟ್ (503 ಅಂಕ) ಉತ್ತಮ ಫಲಿತಾಂಶವನ್ನು ಪಡೆದುಕೊಂಡಿದ್ದಾರೆ.
ಒಟ್ಟು 7 ವಿದ್ಯಾರ್ಥಿಗಳು 500ಕ್ಕಿಂತಲೂ ಅಧಿಕ ಅಂಕ ಗಳಿಸಿದ್ದು, 13 ವಿದ್ಯಾರ್ಥಿಗಳು 450ಕ್ಕಿಂತ ಅಧಿಕ ಅಂಕ ಗಳಿಸಿ ಗಮನಾರ್ಹ ಫಲಿತಾಂಶ ನೀಡಿದ್ದಾರೆ. ವಿದ್ಯಾಲಯದ ದಶಮಾನೋತ್ಸವದ ಸುಸಂದರ್ಭದಲ್ಲಿ ವಿದ್ಯಾರ್ಥಿಗಳ ಈ ಸಾಧನೆಗೆ ಪ್ರಾಂಶುಪಾಲರು, ಸಂಚಾಲಕರು ಹಾಗೂ ಉಪನ್ಯಾಸಕ ಮತ್ತು ಉಪನ್ಯಾಸಕೇತರ ವರ್ಗದವರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…
ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…