ತಾನು ಇಂಥದ್ದನ್ನು ಸಾಧಸಬೇಕು ಎಂದು ನಾವು ನಿರ್ಣಯಿಸಿ ಕಾರ್ಯತತ್ಪರಾದರೆ ಕೈಗೊಂಡ ಕೆಲಸದಲ್ಲಿ ಯಶಸ್ಸು ಸಾಧಿಸುವುದಕ್ಕೆ ಸಾಧ್ಯ. ಮಾನವ ಬದುಕಿನಲ್ಲಿ ಅಸಾಧ್ಯವೆಂಬುದು ಯಾವುದೂ ಇಲ್ಲ. ಪರೀಕ್ಷೆಯಲ್ಲಿ ಸಂಪೂರ್ಣ ಅಂಕ ಗಳಿಸುವವನಿಗೂ ಇರುವುದು ದಿನದಲ್ಲಿ ಇಪ್ಪತ್ತನಾಲ್ಕು ಗಂಟೆ ಮಾತ್ರ ಎಂಬುದನ್ನು ಮನಸ್ಸಿನಲ್ಲಿಟ್ಟುಕೊಂಡಿರಬೇಕು. ಹಾಗಾಗಿ ಮತ್ತೊಬ್ಬನಿಗೆ ಸಾಧ್ಯವಾಗುವುದು ನಮ್ಮಿಂದ ಯಾಕೆ ಸಾಧ್ಯವಿಲ್ಲ ಎಂದು ಪ್ರಶ್ನೆ ಮಾಡಕೊಳ್ಳಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.
ಅವರು ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಅಕಾಡೆಮಿ ಫಾರ್ ಕಾಂಪೆಟಿಟಿವ್ ಎಗ್ಸಾಮಿನೇಶನ್ಸ್ ವತಿಯಿಂದ ಆರಂಭಿಸಲಾಗಿರುವ ಟಾರ್ಗೆಟ್ ನೀಟ್ 2024 ತರಗತಿಗಳನ್ನು ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದಲ್ಲಿ ಉದ್ಘಾಟಿಸಿ ಸೋಮವಾರ ಮಾತನಾಡಿದರು. ಮೆಡಿಕಲ್ ಕಾಲೇಜಿಗೆ ಪ್ರವೇಶ ಪಡೆಯುವ ಗುರಿಯೊಂದಿಗೆ ಆರಂಭಿಸಲಾಗಿರುವ ನೀಟ್ ರಿಪೀಟರ್ಸ್ ತರಗತಿಗಳನ್ನು ವಿದ್ಯಾರ್ಥಿಗಳು ತುಂಬ ಗಂಭೀರವಾಗಿ ಪರಿಗಣಿಸಬೇಕು. ಗೆಲುವೊಂದೇ ಗುರಿ ಎಂಬಂತೆ ಶ್ರಮವಹಿಸಬೇಕು. ಮೊಬೈಲ್ ಟಿವಿಗಳ ಆಕರ್ಷಣೆಯಿಂದ ದೂರ ಇದ್ದು ಓದುವ ಕಡೆಗಷ್ಟೇ ಲಕ್ಷ್ಯ ಹರಿಸಿ ಮುನ್ನಡೆಯಬೇಕು. ನಮ್ಮ ಸತತ ಪ್ರಯತ್ನವಷ್ಟೇ ನಮ್ಮನ್ನು ಯಶಸ್ಸಿನ ಹಾದಿಯೆಡೆಗೆ ಕೈಹಿಡಿದು ನಡೆಸುತ್ತದೆ ಎಂಬುದನ್ನು ಮರೆಯಬಾರದು ಎಂದು ನುಡಿದರು.
ಟಾರ್ಗೆಟ್ ನೀಟ್ 2024 ಇದರ ಸಂಯೋಜಕ ಕಿಶೋರ್ ಭಟ್ ಮಾತನಾಡಿ ರಿಪೀಟರ್ಸ್ ಬ್ಯಾಚ್ ಎಂಬುದು ಆ ಪರೀಕ್ಷೆಯನ್ನು ಮತ್ತೊಮ್ಮೆ ಬರೆಯುವವರು ಎಂಬುದನ್ನು ಸೂಚಿಸುತ್ತದೆ. ಹಾಗಾಗಿ ಒಮ್ಮೆ ಬರೆದ ಅನುಭವ ಮುಂದಿನ ಪರೀಕ್ಷೆಗೆ ಸಹಕಾರಿಯಾಗಲಿದೆ. ಅನೇಕರಿಗೆ ಎರಡನೆಯ ಅವಕಾಶ ದೊರಕುವುದಿಲ್ಲ. ಆದರೆ ಅಂತಹ ಅವಕಾಶ ಲಭ್ಯವಾದಾಗ ಅದನ್ನು ಸದ್ಬಳಕೆ ಮಾಡಬೇಕಾದದ್ದು ಪ್ರತಿಯೊಬ್ಬರ ಕರ್ತವ್ಯ. 720 ಅಂಕಗಳಿಗೆ ನಡೆಯುವ ನೀಟ್ ಪರೀಕ್ಷೆಯಲ್ಲಿ ಕನಿಷ್ಟ 650ಕ್ಕಿಂತ ಅಧಿಕ ಅಂಕ ಪಡೆಯುತ್ತೇವೆಂಬ ಹಠದೊಂದಿಗೆ ಪ್ರಯತ್ನ ಪಡಬೇಕು ಎಂದು ಕರೆನೀಡಿದರು.
ಕಾರ್ಯಕ್ರಮದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯೆ ಸುಚಿತ್ರಾ ಪ್ರಭು, ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ, ಬೋಧಕ ಬೋಧಕೇತರ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಎಂ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…
ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 3/4 ಕಪ್ ,ನೀರು…
2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…