ದೇಶಾದ್ಯಂತ ನಾಳೆ ನೀಟ್ – ಯುಜಿ ಪರೀಕ್ಷೆ ನಡೆಯಲಿದೆ. ರಾಜ್ಯದ ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ, ಕಲಬುರಗಿ, ಧಾರವಾಡ, ಮಂಡ್ಯ ಸೇರಿದಂತೆ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ರಾಜ್ಯದ 381 ಪರೀಕ್ಷಾ ಕೇಂದ್ರಗಳಲ್ಲಿ1,49,000 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ1.30 ರೊಳಗೆ ಹಾಜರಿರುವಂತೆ ಸೂಚಿಸಲಾಗಿದೆ. ಅಭ್ಯರ್ಥಿಗಳಿಗೆ ಈಗಾಗಲೇ ವಸ್ತ್ರ ಸಂಹಿತೆ ಸಹಿತ ಪ್ರಮುಖ ಸೂಚನೆಗಳನ್ನು ಪಾಲಿಸುವಂತೆ ತಿಳಿಸಲಾಗಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಕಡ್ಡಾಯವಾಗಿರಲಿದೆ. ಅಭ್ಯರ್ಥಿಗಳು ಪೂರ್ಣತೋಳಿರುವ ಮೇಲಂಗಿಯನ್ನು ಹಾಗೂ ದೊಡ್ಡ ಬಟನ್‌ಗಳಿರುವ ಶರ್ಟ್, ಕಿವಿಓಲೆ, ಬಳೆ, ಮೂಗುತಿ ಸೇರಿದಂತೆ ಯಾವುದೇ ಮೆಟಲ್ ಉಪಕರಣಗಳನ್ನು ಧರಿಸುವಂತಿಲ್ಲ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…