ನಾಳೆ ನೀಟ್ ಪರೀಕ್ಷೆ- ದ.ಕ. ಜಿಲ್ಲೆಯಲ್ಲಿ 5570 ಅಭ್ಯರ್ಥಿಗಳು – ದ.ಕ. ಜಿಲ್ಲೆಯಲ್ಲಿ ಬಿಗು ಭದ್ರತೆ, 12 ಕೇಂದ್ರಗಳಲ್ಲಿ ಪರೀಕ್ಷೆ

June 19, 2026
8:35 PM
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5,570 ಅಭ್ಯರ್ಥಿಗಳು ನೀಟ್ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಮಂಗಳೂರಿನ 12 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಸಿಎಪಿಎಫ್ ಭದ್ರತೆ, ಸಿಸಿಟಿವಿ ಕಣ್ಗಾವಲು ಹಾಗೂ ಕಟ್ಟುನಿಟ್ಟಿನ ತಪಾಸಣೆಯೊಂದಿಗೆ ಪರೀಕ್ಷೆ ನಡೆಸಲು ಸಿದ್ಧತೆ ಪೂರ್ಣಗೊಂಡಿದೆ.

ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ಜೂನ್ 21 ರಂದು ರಾಷ್ಟ್ರಾದ್ಯಂತ ನಡೆಯಲಿರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್)ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 5,570 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

ಜಿಲ್ಲೆಯ 12 ಪರೀಕ್ಷಾ ಕೇಂದ್ರಗಳಲ್ಲಿ ನೀಟ್ ಪರೀಕ್ಷೆ ನಡೆಯಲಿದ್ದು, ಎಲ್ಲಾ ಕೇಂದ್ರಗಳು ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿವೆ. ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಕೆ. ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಅಪರ ಜಿಲ್ಲಾಧಿಕಾರಿಗಳು, ಪರೀಕ್ಷೆಯನ್ನು ನಕಲು ಮುಕ್ತ, ಪಾರದರ್ಶಕ ಹಾಗೂ ವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಕಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ಆಸನ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲಿ ಇಬ್ಬರು ಮೇಲ್ವಿಚಾರಕರನ್ನು ನಿಯೋಜಿಸಲಾಗುತ್ತದೆ ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಬಿಗು ಭದ್ರತೆಯಲ್ಲಿ ಪರೀಕ್ಷೆ :  ಬಾರಿ ನೀಟ್ ಪರೀಕ್ಷೆಯನ್ನು ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಯೊಂದಿಗೆ ನಡೆಸಲಾಗುತ್ತಿದೆ. ಸ್ಥಳೀಯ ಪೊಲೀಸರೊಂದಿಗೆ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್) ಸಿಬ್ಬಂದಿಯನ್ನೂ ನಿಯೋಜಿಸಲಾಗಿದ್ದು, 30 ಸದಸ್ಯರ ತಂಡ ಮಂಗಳೂರಿಗೆ ಆಗಮಿಸಲಿದೆ.

ಪ್ರತಿ ಪರೀಕ್ಷಾ ಕೇಂದ್ರಕ್ಕೂ ಸಶಸ್ತ್ರ ಪೊಲೀಸ್ ಭದ್ರತೆ ಒದಗಿಸಲಾಗುತ್ತದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಜಿಲ್ಲೆಗೆ ಇಬ್ಬರು ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದು, ಪರೀಕ್ಷಾ ಕಾರ್ಯಗಳ ಮೇಲೆ ನಿಗಾ ಇರಿಸಲಿದ್ದಾರೆ.

ನಿಷೇಧಿತ ವಸ್ತುಗಳು :  ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಫೋನ್, ಪೆನ್ ಡ್ರೈವ್, ಇಯರ್‌ಫೋನ್, ಮೈಕ್ರೋಫೋನ್, ಬ್ಲೂಟೂತ್ ಸಾಧನ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಕೊಂಡೊಯ್ಯಲು ಅವಕಾಶವಿರುವುದಿಲ್ಲ. ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಮೊಬೈಲ್ ಬಳಕೆ ಮತ್ತು ಫೋಟೋಗ್ರಫಿ ಸಂಪೂರ್ಣ ನಿಷೇಧಿಸಲಾಗಿದೆ.

ಪರೀಕ್ಷೆ ಸಿಸಿಟಿವಿ ಕಣ್ಗಾವಲಿನಲ್ಲಿ ನಡೆಯಲಿದ್ದು, ಎಲ್ಲಾ ಕ್ಯಾಮೆರಾಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಬೆಳಿಗ್ಗೆ 11ರಿಂದ ಪ್ರವೇಶ : ಅಭ್ಯರ್ಥಿಗಳು ಭಾನುವಾರ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷಾ ಕೇಂದ್ರ ಪ್ರವೇಶಿಸಬಹುದು. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.15ರವರೆಗೆ ಪರೀಕ್ಷೆ ನಡೆಯಲಿದೆ.

ವಿಶೇಷಚೇತನ ಅಭ್ಯರ್ಥಿಗಳಿಗೆ ಹೆಚ್ಚುವರಿ ಒಂದು ಗಂಟೆ ಕಾಲಾವಕಾಶ ನೀಡಲಾಗಿದ್ದು, ಈ ಬಾರಿ ಎಲ್ಲಾ ಅಭ್ಯರ್ಥಿಗಳಿಗೂ ಹೆಚ್ಚುವರಿ 15 ನಿಮಿಷಗಳ ಸಮಯವನ್ನು ಒದಗಿಸಲಾಗಿದೆ.

ಪರೀಕ್ಷಾ ಕೇಂದ್ರಗಳ ಹೊರಗೆ ಜನಸಂದಣಿ ನಿಯಂತ್ರಣ, ಭದ್ರತಾ ವ್ಯವಸ್ಥೆ ಹಾಗೂ ಸಮಯ ಪಾಲನೆಗೆ ಪೊಲೀಸ್ ಇಲಾಖೆ, ಖಜಾನೆ ಇಲಾಖೆ ಮತ್ತು ಇತರೆ ಸಂಬಂಧಿತ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಲು ಸೂಚನೆ ನೀಡಲಾಗಿದೆ.

A total of 5,570 candidates from Dakshina Kannada district will appear for the NEET examination on June 21 at 12 centres located in Mangaluru city. Authorities have put in place strict security measures, including CAPF deployment, CCTV surveillance, intensive screening, and restrictions on electronic gadgets to ensure a fair and transparent examination process.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ
July 10, 2026
12:16 PM
by: ದ ರೂರಲ್ ಮಿರರ್.ಕಾಂ
ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ
July 10, 2026
7:44 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror