Advertisement
ಸುದ್ದಿಗಳು

ನೇಪಾಳದಿಂದ ಭಾರತೀಯ ಮಾವಿನ ಹಣ್ಣಿಗೆ ನಿರ್ಬಂಧ – ಕೀಟನಾಶಕ ಅಂಶಗಳು ಪತ್ತೆ ಹಿನ್ನೆಲೆ ಕ್ರಮ

Share

ಭಾರತದಿಂದ ಆಮದು ಆಗುತ್ತಿರುವ ಮಾವಿನ ಹಣ್ಣುಗಳಲ್ಲಿ ಅತಿಯಾದ ಕೀಟನಾಶಕ ಅಂಶಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ ತಾತ್ಕಾಲಿಕ ನಿರ್ಬಂಧ ಹೇರಿದೆ. ಗಡಿ ಭಾಗದ ಕ್ವಾರಂಟೈನ್ ಕೇಂದ್ರಗಳಲ್ಲಿ ಈ ನಿರ್ಬಂಧ ಜಾರಿಗೊಳಿಸಲಾಗಿದ್ದು, ಇದರ ಪರಿಣಾಮ ಭಾರತೀಯ ರಫ್ತುದಾರರು ಹಾಗೂ ಹಣ್ಣು ವ್ಯಾಪಾರಿಗಳಲ್ಲಿ ಆತಂಕ ಮೂಡಿಸಿದೆ.

ನೇಪಾಳ ಸರ್ಕಾರದ ಪ್ರಕಾರ, ಆಮದು ಆಗುತ್ತಿದ್ದ ಕೆಲವು ಮಾವಿನ ಹಣ್ಣುಗಳಲ್ಲಿ ಸುರಕ್ಷಿತ ಮಿತಿಗಿಂತ ಅಧಿಕ ಪ್ರಮಾಣದ ರಾಸಾಯನಿಕ ಕೀಟನಾಶಕಗಳ ಅವಶೇಷಗಳು ಕಂಡುಬಂದಿದ್ದು, ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಈ ನಿರ್ಧಾರದಿಂದ ನೇಪಾಳದ ಸ್ಥಳೀಯ ಮಾವು ಬೆಳೆಗಾರರಿಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಅವಕಾಶ ಸಿಗುವ ನಿರೀಕ್ಷೆ ಇದೆ. ಆದರೆ ದೇಶೀಯ ಉತ್ಪಾದನೆ ಮಾತ್ರ ಬೇಡಿಕೆಯನ್ನು ಸಂಪೂರ್ಣವಾಗಿ ಪೂರೈಸಲು ಸಾಕಾಗುವುದಿಲ್ಲ ಎಂಬ ಆತಂಕವನ್ನು ಅಲ್ಲಿನ ವ್ಯಾಪಾರಿಗಳು ವ್ಯಕ್ತಪಡಿಸಿದ್ದಾರೆ.

ವ್ಯಾಪಾರಿಗಳ ಪ್ರಕಾರ, ಸಂಪೂರ್ಣ ನಿರ್ಬಂಧ ಹೇರಿಸುವ ಬದಲು ಗುಣಮಟ್ಟ ಪರೀಕ್ಷೆ ಮತ್ತು ಕ್ವಾರಂಟೈನ್ ವ್ಯವಸ್ಥೆಯನ್ನು ಬಲಪಡಿಸಿ ಸುರಕ್ಷಿತ ಹಣ್ಣುಗಳಿಗೆ ಮಾತ್ರ ಅನುಮತಿ ನೀಡಬಹುದಿತ್ತು. ದೀರ್ಘಕಾಲ ಈ ನಿರ್ಬಂಧ ಮುಂದುವರಿದರೆ ಮಾವು ಸೇರಿದಂತೆ ಇತರೆ ಹಣ್ಣುಗಳ ಕೊರತೆ ಹಾಗೂ ಬೆಲೆ ಏರಿಕೆ ಸಂಭವಿಸುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದ್ದಾರೆ.

ಭಾರತವು ನೇಪಾಳಕ್ಕೆ ಪ್ರಮುಖ ಹಣ್ಣು ರಫ್ತು ರಾಷ್ಟ್ರಗಳಲ್ಲಿ ಒಂದಾಗಿದೆ. ಈ ಬೆಳವಣಿಗೆ ಭಾರತದ ಹಣ್ಣು ರಫ್ತು ವಲಯಕ್ಕೆ ಮತ್ತೊಂದು ಎಚ್ಚರಿಕೆಯ ಸಂದೇಶವಾಗಿದ್ದು, ಕೀಟನಾಶಕ ಬಳಕೆ, ಅವಶೇಷ ಪರೀಕ್ಷೆ ಹಾಗೂ ಅಂತರರಾಷ್ಟ್ರೀಯ ಆಹಾರ ಸುರಕ್ಷತಾ ಮಾನದಂಡಗಳ ಪಾಲನೆಯ ಅಗತ್ಯವನ್ನು ಮತ್ತೊಮ್ಮೆ ಒತ್ತಿ ಹೇಳಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Nepal has temporarily restricted imports of mangoes from India after detecting excessive pesticide residues in imported consignments. While the move is expected to benefit local mango growers in Nepal, traders fear shortages and price hikes due to insufficient domestic production. The development highlights the importance of strict pesticide management and food safety compliance in agricultural exports.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ

ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುನ್ಸೂಚನೆಯಲ್ಲಿದ್ದಷ್ಟು…

12 hours ago

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

1 day ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

2 days ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

3 days ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

3 days ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

3 days ago