Advertisement
ಸುದ್ದಿಗಳು

ರಾಜ್ಯ ಬಿಜೆಪಿಗೆ ಇಂದಿನಿಂದ ಹೊಸ ಸಾರಥಿ | ಬಿ ವೈ ವಿಜಯೇಂದ್ರ ಅವರಿಗೆ ಅಧಿಕಾರ ಹಸ್ತಾಂತರಿಸಿದ ನಳಿನ್ ಕುಮಾರ್‌ ಕಟೀಲ್‌ |

Share

ಹಲವು ದಿನಗಳಿಂದ ಖಾಲಿ ಇದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸ ಸಾರಥಿಯ ನೇಮಕ ಆಗಿದೆ. ಇಂದು ಕರ್ನಾಟಕ ಬಿಜೆಪಿಯ (Karnataka BJP) 11ನೇ ಅಧ್ಯಕ್ಷರಾಗಿ ಶಾಸಕ ವಿಜಯೇಂದ್ರ ಅಧಿಕಾರ ಸ್ವೀಕರಿಸಿದರು. ಕರ್ನಾಟಕ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ವಿಜಯೇಂದ್ರ ಅವರಿಗೆ ನಳಿನ್‌ ಕುಮಾರ್‌ ಕಟೀಲ್‌ (Nalin Kumar Kateel) ಅವರು ಪಕ್ಷದ ಬಾವುಟವನ್ನು ನೀಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು.

Advertisement
Advertisement

ನಾನು ಲಿಂಗಾಯತ, ನಾನು ಒಕ್ಕಲಿಗ, ಆ ಜಾತಿ, ಈ ಜಾತಿ ಅಂತ ಬಿಟ್ಟು ನಾನು ಭಾರತೀಯ ಜನತಾ ಪಾರ್ಟಿಯ (BJP) ಕಾರ್ಯಕರ್ತ ಅಂತ ಭಾವಿಸಿ ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕೆ ಕೆಲಸ ಮಾಡಬೇಕೆಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ. ಈ ವೇಳೆ ಮಾತನಾಡಿದ ಅವರು, ದೀಪಾವಳಿ (Deepavali) ಶುಭ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟೀಯ ಅಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್‌ ಶಾ, ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್‌ ಸಂತೋಷ್ ಅವರ ಅಶೀರ್ವಾದದಿಂದ ನಾನು ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದೇನೆ. ರಾಜ್ಯದ ಲಕ್ಷಾಂತರ ಕಾರ್ಯಕರ್ತರು ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಲು ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಆರಂಭದಲ್ಲೇ ಹೇಳಿದರು.

Advertisement

28ಕ್ಕೆ 28 ಲೋಕಸಭಾ ಕ್ಷೇತ್ರವನ್ನು ಗೆಲ್ಲುವುದು ಈಗ ನಮ್ಮ ಮುಂದಿರುವ ಗುರಿ. ಇದರಲ್ಲಿ ನಮ್ಮ ಸ್ವಾರ್ಥ ಇಲ್ಲ. ಒಂದು ದಿನವೂ ರಜೆ ತೆಗೆದುಕೊಳ್ಳದೇ ಭಾರತ ದೇಶವನ್ನು ಅಗ್ರಮಾನ್ಯ ದೇಶವನ್ನಾಗಿ ಮಾಡಬೇಕು ಎಂದು ಕನಸು ಕಾಣುತ್ತಿರುವ ಪ್ರಧಾನಿ ಮೋದಿ ಅವರ ಬಲವನ್ನು ಬಲಪಡಿಸಬೇಕು. ಹಿಂದೆ 20ಕ್ಕೂ ಹೆಚ್ಚು ಲೋಕಸಭಾ ಸ್ಥಾನವನ್ನು ನಾವು ಗೆಲ್ಲುತ್ತೇವೆ ಎಂದಾಗ ಯಡಿಯೂರಪ್ಪನವರನ್ನು ಹಾಸ್ಯ ಮಾಡಿದ್ದರು. ಆದರೆ ಅವರ ಅಧ್ಯಕ್ಷತೆಯಲ್ಲಿ 25 ಸ್ಥಾನವನ್ನು ಬಿಜೆಪಿ ಗೆದ್ದುಕೊಂಡಿತ್ತು. ಈಗ ನಾವು 28 ಕ್ಷೇತ್ರಗಳನ್ನು ಗೆಲ್ಲಲು ಕೆಲಸ ಮಾಡಬೇಕು ಎಂದು ಹೇಳಿದರು.

Advertisement

ಚುನಾವಣಾ ಸಮಯದಲ್ಲಿ ಕಾಂಗ್ರೆಸ್‌ (Congress) ನಾಯಕರು ನಮ್ಮ ಸರ್ಕಾರವನ್ನು 40% ಸರ್ಕಾರ ಎಂದು ಟೀಕೆ ಮಾಡಿದರು. ಕಾಂಗ್ರೆಸ್‌ನ ಹೇಳಿದ ಸುಳ್ಳನ್ನು ಜನರು ನಂಬಿದರು.ಈಗ ಕಾಂಗ್ರೆಸ್‌ ನಾನು ಹೇಳಿದ ಆರೋಪವನ್ನು ಜಾರಿ ಮಾಡಲು ಹೊರಟಿದೆ. ಆಡಳಿತ ಪಕ್ಷದ ಶಾಸಕರು ತಲೆ ತಗ್ಗಿಸಿಕೊಂಡು ಓಡಾಡುತ್ತಿದ್ದಾರೆ. ಅವರಿಗೆ ಯಾವುದೇ ಅನುದಾನ ಸಿಗುತ್ತಿಲ್ಲ. ದಕ್ಷಿಣ ಭಾರತದ ಬಿಜೆಪಿ ಭದ್ರಕೋಟೆಯಾಗಿರುವ ಕರ್ನಾಟಕದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅರಳಿಸಲು ನಾವೆಲ್ಲರೂ ಮತ್ತೊಮ್ಮೆ ಸಂಕಲ್ಪ ತೊಟ್ಟು ಕೆಲಸ ಮಾಡಬೇಕಿದೆ ಎಂದು ಕರೆ ನೀಡಿದರು.

ಈ ವೇಳೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ನಡ್ಡಾ ಆಶೀರ್ವಾದ, ಆದೇಶದಂತೆ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಅಮಿತ್ ಶಾ ಅವರನ್ನು ಬೆಂಗಳೂರಿಗೆ ಕರೆಸಿ ಲಕ್ಷ ಜನರನ್ನು ಆಹ್ವಾನಿಸಿ ದೊಡ್ಡ ಸಮಾರಂಭ ಮಾಡುತ್ತೇವೆ. ವಿಜಯೇಂದ್ರ ಘೋಷಣೆ ಬಳಿಕ ಉತ್ಸಾಹ ಹೆಚ್ಚಾಗಿದೆ ಎಂದು ಹೇಳಿದರು.

Advertisement

ನಳಿನ್‌ ಕುಮಾರ್‌ ಕಟೀಲ್‌ ಮಾತನಾಡಿ, ನನಗೆ ಹೇಗೆ ಸಹಕಾರ, ಶಕ್ತಿಯನ್ನ ಕೊಟ್ಟಿದ್ದೀರಿ ಹಾಗೆ ವಿಜಯೇಂದ್ರ ಅವರಿಗೂ ಕೊಡಬೇಕು. ಎಲ್ಲಾ ಹಿರಿಯರ ಸಹಕಾರ ಇರುತ್ತದೆ. ಸಾಮೂಹಿಕ ನಾಯಕತ್ವದ ಮೂಲಕ ಪಕ್ಷ ಸಂಘಟನೆ ಮಾಡಬೇಕು. ವಿಜಯೇಂದ್ರಗೆ ಬೆಂಗಾವಲಾಗಿ ಜೊತೆಯಲ್ಲಿ ಇರುತ್ತೇವೆ ಎಂದು ತಿಳಿಸಿದರು.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |

ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…

8 hours ago

ಕೋವಿ ಡಿಪಾಸಿಟ್‌ ಪ್ರಕರಣ | ಮಹತ್ವದ ತೀರ್ಪು | ಚುನಾವಣಾ ಕಾಲದಲ್ಲಿ ಕೋವಿ ಡಿಪಾಸಿಟ್‌ಗೆ ಪರಿಹಾರ |

ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.

9 hours ago

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…

16 hours ago

ಸ್ಟ್ರೀಟ್ ಫುಡ್ ವರ್ಸಸ್ ಆರೋಗ್ಯ | ನಿಮ್ಮ ಆರೋಗ್ಯವನ್ನು ನೀವೇ ಕಾಪಾಡಿಕೊಳ್ಳಿ

ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್‌ ಆಳ್ವ ಅವರು ಬರೆದಿದ್ದಾರೆ.

17 hours ago