ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 55ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ಧರ್ಮಸ್ಥಳದಿಂದ ಹೊಸ ಯೋಜನೆಗಳನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಕಟಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಆಪತ್ತು ಸಂಭವಿಸಿದಾಗ ತುರ್ತು ನೆರವು ಮತ್ತುರಕ್ಷಣೆಗಾಗಿ ಮೂರು ಸಾವಿರ “ಶೌರ್ಯ” ಸ್ವಯಂ ಸೇವಕರ ತಂಡಗಳನ್ನು ರಚಿಸಲಾಗಿದೆ. ಸದ್ಯದಲ್ಲಿಯೇರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದನ್ನು ಉದ್ಘಾಟಿಸಲಿದ್ದಾರೆ ಎಂದು ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದರು.
ಇದರ ಜೊತೆಗೆ ರಾಜ್ಯಸಭಾ ಸದಸ್ಯನ ನೆಲೆಯಲ್ಲಿ ಬೀದರ್ ಜಿಲ್ಲೆಯಲ್ಲಿ ಹಾಲು ಉತ್ಪಾದನೆಗೆ ಪ್ರೋತ್ಸಾಹ ನೀಡಲು ಉದ್ದೇಶಿಸಿದ್ದು ಈಗಾಗಲೇ ಸಮೀಕ್ಷೆ ನಡೆಸಲಾಗಿದೆ. ಸರ್ಕಾರದ ಸೇವೆಗಳನ್ನು ಜನರಿಗೆತಲುಪಿಸಲು ಈಗಾಗಲೇ ಆರು ಸಾವಿರದ ಐದುನೂರು ಸಾಮಾನ್ಯ ಸೇವಾ ಕೇಂದ್ರಗಳನ್ನು ಪ್ರಾರಂಭಿಸಿದ್ದು ಈ ವರ್ಷ ಇನ್ನೂಒಂದು ಸಾವಿರ ಸಾಮಾನ್ಯ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು. ಕಳೆದ ವರ್ಷ ಆರು ಕೋಟಿ ರೂ. ವೆಚ್ಚದಲ್ಲಿ ಮೂರು ಆಸ್ಪತ್ರೆಗಳಿಗೆ ಮೂರು ಸಿ.ಟಿ. ಸ್ಕ್ಯಾನ್ ಯಂತ್ರಗಳನ್ನು ನೀಡಿದ್ದು ಈ ವರ್ಷಇನ್ನೂ ಮೂರು ಸಿ.ಟಿ. ಸ್ಕ್ಯಾನ್ ಯಂತ್ರಗಳನ್ನು ನೀಡಲಾಗುವುದು.
ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಮೂಲಕ ಐವತ್ತು ಲಕ್ಷ ಕುಟುಂಬಗಳ ಫಲಾನುಭವಿಗಳು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಮಹಿಳಾ ಸಬಲೀಕರಣಕ್ಕೆಒತ್ತು ನೀಡಲಾಗುತ್ತಿದೆ. 365 ಸರ್ಕಾರಿ ಶಾಲೆಗಳಿಗೆ 2700 ಬೆಂಚು-ಡೆಸ್ಕುಗಳನ್ನು ವಿತರಿಸಲಾಗುವುದು. ಈ ವರ್ಷ 100 ಕೆರೆಗಳ ಹೂಳೆತ್ತಿ ಪುನಶ್ಚೇತನಕ್ಕೆಯೋಜನೆರೂಪಿಸಲಾಗಿದೆ. 40 ಶುದ್ಧಗಂಗಾ ಘಟಕಗಳ ಮೂಲಕ ಶುದ್ಧಕುಡಿಯುವ ನೀರು ಪೂರೈಸಲಾಗುವುದು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 55ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಾರಂಭದಲ್ಲಿಅಭಿನಂದನಾ ಭಾಷಣ ಮಾಡಿದ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ , ಸತ್ಯ, ಧರ್ಮ, ನ್ಯಾಯ – ನೀತಿಯ ನೆಲೆಯಲ್ಲಿ ಸನಾತನ ಸಂಸ್ಕøತಿಯ ಸಂರಕ್ಷಣೆಯೊಂದಿಗೆ ಮನಪರಿವರ್ತನೆ ಮೂಲಕ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಸೇವಾ ಕಾರ್ಯಗಳು ಹಾಗೂ ಕ್ರಾಂತಿಕಾರಿ ಪರಿವರ್ತನೆ ಸಾರ್ವಕಾಲಿಕ ಮೌಲ್ಯ ಹೊಂದಿದ್ದುಆದರ್ಶ ಹಾಗೂ ಅನುಕರಣೀಯವಾಗಿದೆ ಎಂದರು.
ಹೇಮಾವತಿ ಹೆಗ್ಗಡೆ, ಡಿ. ಸುರೇಂದ್ರಕುಮಾರ್, ಪ್ರೊ.ಎಸ್. ಪ್ರಭಾಕರ್, ಡಿ. ರಾಜೇಂದ್ರಕುಮಾರ್, ಮಾಣಿಲದ ಮೋಹನದಾಸ ಸ್ವಾಮೀಜಿ ಶಾಸಕ ಕೆ. ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮತ್ತುಎಸ್.ಡಿ. ಸಂಪತ್ ಸಾಮ್ರಾಜ್ಯ ಶಿರ್ತಾಡಿ ಉಪಸ್ಥಿತರಿದ್ದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಸಿ.ಒ.ಒ. ಅನಿಲ್ ಸ್ವಾಗತಿಸಿದರು. ಡಿ.ಎಂ.ಸಿ.ಯ ಪ್ರಭಾಕರ್ ವಂದಿಸಿದರು. ಉಪನ್ಯಾಸ ಮಹಾವೀರ ಜೈನ್ ಕಾರ್ಯಕ್ರಮ ನಿರ್ವಹಿಸಿದರು.