ಪಶ್ಚಿಮ ಘಟ್ಟದ ಉಷ್ಣ ವಲಯ ಮಳೆ ಕಾಡುಗಳಲ್ಲಿ, ಸೊನೆರೆಲಾ ಎಂಬ ವರ್ಗದ ಮೂರು ಹೊಸ ಸಸ್ಯ ಪ್ರಭೇದಗಳನ್ನು ದಾವಣಗೆರೆ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ಅಧ್ಯಯನ ವಿಭಾಗದ ತಂಡ ಪತ್ತೆ ಹಚ್ಚಿದೆ. ಸಹಾಯಕ ಪ್ರಾಧ್ಯಾಪಕ ಡಾ. ಸಿದ್ದಪ್ಪ ಬಿ. ಕಕ್ಕಳಮೇಲಿ ಮತ್ತು ಸಂಶೋಧನಾ ವಿದ್ಯಾರ್ಥಿ ಪ್ರಶಾಂತ್ ಕಾರದಕಟ್ಟೆ ಅವರ ತಂಡ ಚಿಕ್ಕಮಗಳೂರು ಜಿಲ್ಲೆಯ ಬಾಬ ಬುಡನ್ ಗಿರಿ, ಕೊಡಗು ಜಿಲ್ಲೆಯ, ಕಡಮಕ್ಕಲ್ ನ ಮಲ್ಲಳ್ಳಿ ಜಲಪಾತ, ಶಿವಮೊಗ್ಗದ ಕವಲೇದುರ್ಗ ಹಾಗೂ ಚಾರ್ಮಾಡಿ ಘಾಟ್ ಪ್ರದೇಶಗಳಲ್ಲಿ ಈ ವಿಶೇಷ ಸಸ್ಯ ಪ್ರಬೇದಗಳನ್ನು ಪತ್ತೆ ಹಚ್ಚಿದ್ದಾರೆ.
ಅಪರೂಪದ ಸಸ್ಯ ಪ್ರಭೇದಗಳು ಪಶ್ಚಿಮಘಟ್ಟದಲ್ಲಿ ಪತ್ತೆಯಾಗಿದ್ದು, ಅವು, ಜೀವ ವೈವಿಧ್ಯತೆಗೆ ಸಾಕ್ಷಿಯಾಗಿದೆ. ಸೊನೆರೆಲಾ ಜಾತಿಯ ಮೂರು ಪ್ರಭೇದಗಳನ್ನು ಪತ್ತೆ ಹಚ್ಚಲಾಗಿದ್ದು, ಅಂತಾರಾಷ್ಟ್ರೀಯ ಪತ್ರಿಕೆಗಳಲ್ಲೂ ಈ ಕುರಿತಾಗಿ ಮಾಹಿತಿ ಪ್ರಕಟಿಸಲಾಗಿದೆ ಎಂದು ಡಾ. ಸಿದ್ದಪ್ಪ ಬಿ. ಕಕ್ಕಳಮೇಲಿ ಹೇಳಿದ್ದಾರೆ.
ಸಸ್ಯಶಾಸ್ತ್ರ ವಿಭಾಗದ ವತಿಯಿಂದ ಸಾಕಷ್ಟು ಸಂಶೋಧನೆ ನಡೆಸುತ್ತಿದ್ದು, ಪ್ರಸ್ತುತ ಪತ್ತೆಯಾಗಿರುವ ಹೊಸ ಸಸ್ಯ ಪ್ರಭೇದಗಳು, ವಾಯುಮಾಲಿನ್ಯ ತಡೆಗಟ್ಟುವಲ್ಲಿ ಸಹಕಾರಿಯಾಗಿವೆ ಎಂದು ಹೇಳುತ್ತಾರೆ ವಿದ್ಯಾರ್ಥಿ ಪ್ರಶಾಂತ್ ಕಾರದಕಟ್ಟೆ.
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…
ಉತ್ತರ ಭಾರತದ ಶುಷ್ಕ ಗಾಳಿ ಹಾಗೂ ಪೆಸಿಫಿಕ್ ಸಾಗರದ ಪ್ರಬಲ ಚಂಡಮಾರುತಗಳ ಪರಿಣಾಮ…
ಹೊಸ ಅಡಿಕೆಯ ಆರಂಭಿಕ ಧಾರಣೆ ₹330–350ಕ್ಕೆ ನಿಗದಿಯಾಗಿದ್ದು, ಆಮದು ಅಡಿಕೆಗೆ ಇರುವ ₹351ರ…
ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…
ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…