ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಪ್ರವಾಸಿ ತಾಣಗಳಿಗೆ ತೆರಳುವ ಪ್ರವಾಸಿಗರಿಗೆ ಸೆಪ್ಟಂಬರ್ 1 ರಿಂದ ನೂತನ ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಭಾಗದಲ್ಲಿ ಉಂಟಾಗುತ್ತಿರುವ ಅಪಘಾತಗಳು, ಟ್ರಾಫಿಕ್ ಸಮಸ್ಯೆ, ಜನ ಸಂದಣಿ ಇವುಗಳನ್ನು ನಿಯಂತ್ರಿಸಲು ಈ ನಿಯಮ ಜಾರಿಗೊಳಿಸಲಾಗಿದೆ.
ಮುಳ್ಳಯನಗಿರಿ, ಸೀತಾಳಯ್ಯನಗಿರಿ, ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ, ದರ್ಗಾ, ಮಾಣಿಕ್ಯಧಾರ ಪ್ರವಾಸಿ ತಾಣಗಳಿಗೆ ಬೆಳಗ್ಗೆ 6 ರಿಂದ ಮಧ್ಯಾಹ್ನ 12 ಹಾಗು ಮಧ್ಯಾಹ್ನ1 ರಿಂದ ಸಂಜೆ 6 ಗಂಟೆವರೆಗೆ ಎರಡು ಹಂತದಲ್ಲಿ ಪ್ರವಾಸಿಗರ ವಾಹನಗಳು ತೆರಳಲು ಅನುಮತಿ ನೀಡಲಾಗಿದೆ. ಒಂದು ದಿನಕ್ಕೆ 600 ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಖಾಸಗಿ ಬಸ್ ಹಾಗು ಮಿನಿ ಬಸ್‌ಗಳಲ್ಲಿ ತೆರಳಲು ಅವಕಾಶವಿಲ್ಲ. ಇನ್ನು ಗಿರಿ ಭಾಗಕ್ಕೆ ತೆರಳುವ ಮುನ್ನ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ನೋಂದಣಿಮಾಡಿ ಪ್ರವೇಶ ಶುಲ್ಕ ಪಾವತಿಸುವುದು ಕಡ್ಡಾಯವಾಗಿದೆ ಎಂದು ಅವರು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….




