ಸೆ.1ರಿಂದ ಮುಳ್ಳಯ್ಯನಗಿರಿಗೆ ತೆರಳುವವರಿಗೆ ನೂತನ ನಿಯಮ ಜಾರಿ

August 29, 2025
8:31 PM

ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಪ್ರವಾಸಿ ತಾಣಗಳಿಗೆ ತೆರಳುವ ಪ್ರವಾಸಿಗರಿಗೆ ಸೆಪ್ಟಂಬರ್ 1 ರಿಂದ ನೂತನ ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಭಾಗದಲ್ಲಿ ಉಂಟಾಗುತ್ತಿರುವ ಅಪಘಾತಗಳು, ಟ್ರಾಫಿಕ್ ಸಮಸ್ಯೆ, ಜನ ಸಂದಣಿ ಇವುಗಳನ್ನು ನಿಯಂತ್ರಿಸಲು ಈ ನಿಯಮ ಜಾರಿಗೊಳಿಸಲಾಗಿದೆ.

ಮುಳ್ಳಯನಗಿರಿ, ಸೀತಾಳಯ್ಯನಗಿರಿ, ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ, ದರ್ಗಾ,  ಮಾಣಿಕ್ಯಧಾರ ಪ್ರವಾಸಿ ತಾಣಗಳಿಗೆ ಬೆಳಗ್ಗೆ 6 ರಿಂದ ಮಧ್ಯಾಹ್ನ 12 ಹಾಗು ಮಧ್ಯಾಹ್ನ1 ರಿಂದ ಸಂಜೆ 6 ಗಂಟೆವರೆಗೆ ಎರಡು ಹಂತದಲ್ಲಿ ಪ್ರವಾಸಿಗರ ವಾಹನಗಳು ತೆರಳಲು ಅನುಮತಿ ನೀಡಲಾಗಿದೆ. ಒಂದು ದಿನಕ್ಕೆ 600 ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಖಾಸಗಿ ಬಸ್ ಹಾಗು ಮಿನಿ ಬಸ್‌ಗಳಲ್ಲಿ ತೆರಳಲು ಅವಕಾಶವಿಲ್ಲ. ಇನ್ನು ಗಿರಿ ಭಾಗಕ್ಕೆ ತೆರಳುವ ಮುನ್ನ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ನೋಂದಣಿಮಾಡಿ ಪ್ರವೇಶ ಶುಲ್ಕ ಪಾವತಿಸುವುದು ಕಡ್ಡಾಯವಾಗಿದೆ ಎಂದು ಅವರು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ
ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ
October 13, 2026
9:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror