ಸೈಬರ್ ಹಾಗೂ ಇನ್ನಿತರ ಅಪರಾಧಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆ ನೂತನ ತಂತ್ರಜ್ಞಾನ ಬಳಸುತ್ತಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಅಪರಾಧಗಳ ಸ್ವರೂಪ ಬದಲಾಗಿದೆ. ದೇಶ ಅಥವಾ ವಿದೇಶದ ಯಾವುದೇ ಮೂಲೆಯಲ್ಲಿ ಕುಳಿತು ಮೋಸ ಮಾಡಬಹುದು. ಸೈಬರ್ ಮೂಲಕ ಅನೇಕ ರೀತಿಯ ವಂಚನೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಯ ತರಬೇತಿ ವಿಷಯಕ್ಕೆ ಸಂಬಂಧಿಸಿದಂತೆ ಸಾಕಷ್ಟು ಬದಲಾವಣೆ ಮಾಡಲಾಗಿದೆ. ತಂತ್ರಜ್ಞಾನಗಳ ಬಗ್ಗೆಯೂ ತರಬೇತಿ ನೀಡಲಾಗುತ್ತಿದೆ. ಎಂದರು. ವಂಚಕರು ಅಪರಾಧ ಮಾಡುವ ವಿಧಾನಗಳನ್ನು ಬದಲಾವಣೆ ಮಾಡಿಕೊಳ್ಳುತ್ತಾ ಹೊಸ ಮಾರ್ಗಗಳನ್ನು ಹುಡುಕಿಕೊಳ್ಳುತ್ತಿದ್ದಾರೆ. ಪೊಲೀಸ್ ಇಲಾಖೆಯ ಕಚೇರಿಯ ಸಂಖ್ಯೆಯಿಂದಲೇ ವಿಪಿಎನ್ ತಂತ್ರಜ್ಞಾನ ಬಳಕೆ ಮಾಡಿ ಕರೆ ಮಾಡಿ ವಂಚನೆ ಮಾಡುತ್ತಿರುವ ಪ್ರಕರಣಗಳು ಕಂಡು ಬರುತ್ತಿವೆ. ಜನರು ಜಾಗೃತರಾಗಬೇಕು. ಹೊಸ ತಂತ್ರಜ್ಞಾನಗಳನ್ನು ವಂಚಕರು ಹೆಚ್ಚಿನ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಎಡಿಜಿಪಿ ತಿಳಿಸಿದರು.
ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…
ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…
ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…
ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು…