MIRROR FOCUS

ಮತ್ತೆ ಎಂಟ್ರಿ ಕೊಡುತ್ತಾ ಚೀನಾದ ಹೊಸ ಕಿಲ್ಲರ್‌ ವೈರಸ್ | ರಾಜ್ಯ ಸರ್ಕಾರಗಳಿಗೆ ಹದ್ದಿನ ಕಣ್ಣಿಡಲು ಕೇಂದ್ರ ಸೂಚನೆ | ಬೆಂಗಳೂರಿನ ಆಸ್ಪತ್ರೆಗಳಲ್ಲಿ ಕಟ್ಟೆಚ್ಚರ |

Share

ಚೀನಾದಲ್ಲಿ (China) ನ್ಯುಮೋನಿಯಾ(Pneumonia) ಮಾದರಿಯ ಮತ್ತೊಂದು ಡೆಡ್ಲಿ ವೈರಸ್(Deadly Virus) ಪತ್ತೆಯಾಗಿದ್ದು, ವಿಶ್ವವನ್ನೇ ಆತಂಕಕ್ಕೆ ದೂಡಿದೆ. ಇತ್ತ ಕೇಂದ್ರ ಆರೋಗ್ಯ ಇಲಾಖೆಯು (Central Health Department) ಭಾರತದಲ್ಲಿ(India) ಹೈ ಅಲರ್ಟ್ ಘೋಷಿಸಿದೆ. ಈ ಬೆನ್ನಲ್ಲೇ ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಆಸ್ಪತ್ರೆಯಲ್ಲಿ(Hospital) ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ತಕ್ಷಣವೇ ಪರಿಶೀಲಿಸುವಂತೆ ಕೇಂದ್ರವು ರಾಜ್ಯ ಸರ್ಕಾರ(State Govt) ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ(Union Territory) ಆಸ್ಪತ್ರೆಗಳ ಸೌಲಭ್ಯ ಪರಿಶೀಲಿಸುವಂತೆ ಖಡಕ್‌ ಸೂಚನೆ ಕೊಟ್ಟಿದೆ.  ಈ ಮಧ್ಯೆ ಬಿಬಿಎಂಪಿ ಕೂಡ ಕಟ್ಟೆಚ್ಚರ ವಹಿಸಲು ಮುಂದಾಗಿದ್ದು, ಖಾಸಗಿ ಆಸ್ಪತ್ರೆಗಳಿಂದಲೂ ಮಾಹಿತಿ ನೀಡುವಂತೆ ಕೇಳಿದೆ.

Advertisement

ಕೊರೋನಾ ಬಳಿಕ ಚೀನಾದಲ್ಲಿ ನ್ಯುಮೋನಿಯಾ ಮಾದರಿ ಜ್ವರ ಕಾಣಿಸಿಕೊಳ್ತಿದೆ. ಅದು ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕೂಡ ಚೀನಾದಿಂದ ವರದಿ ತರಿಸಿಕೊಂಡಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದಾರೆ. ಆಸ್ಪತ್ರೆಗಳಲ್ಲಿ ಹಾಸಿಗೆಗಳು, ಔಷಧಗಳು, ಇನ್ಫ್ಲುಯೆನ್ಸಾ ಲಸಿಕೆಗಳು, ಆಕ್ಸಿಜನ್‌, ಆ್ಯಂಟಿಬಯೊಟಿಕ್‌, ವೈಯಕ್ತಿಕ ಸುರಕ್ಷತೆಯ ಸಾಧನಗಳು ಇತರೇ ಪರೀಕ್ಷಾ ಕಿಟ್‌ಗಳಂತಹ ಮೂಲ ಸೌಕರ್ಯಗಳನ್ನು ಹೆಚ್ಚಿಸಲು ಕ್ರಮ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

ಅಲ್ಲದೇ ಆಕ್ಸಿಜನ್‌ ಪ್ಲಾಂಟ್‌, ವೆಂಟಿಲೇಟರ್‌ಗಳ ಕಾರ್ಯವೈಖರಿ, ಸೋಂಕು ನಿಯಂತ್ರಿಸುವ ಅಗತ್ಯ ಕ್ರಮಗಳ ಬಗ್ಗೆ ಎಚ್ಚರ ವಹಿಸುವಂತೆ ಪತ್ರದಲ್ಲಿ ಸೂಚಿಸಿದ್ದಾರೆ. ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಮುನ್ನೆಚ್ಚರಿಕೆ ಕ್ರಮವಾಗಿ ಅಗತ್ಯವಿದ್ದರೆ ಕೋವಿಡ್‌ ಸಂದರ್ಭದಲ್ಲಿ ಅನುಸರಿಸಲಾದ ಮಾರ್ಗಸೂಚಿಗಳನ್ನು ಜಾರಿಗೆ ತರಬೇಕು. ಅಲ್ಲದೇ ಸೋಂಕಿನ ಲಕ್ಷಣಗಳು ಮತ್ತು ತೀವ್ರ ಉಸಿರಾಟದ ಸಮಸ್ಯೆಗಳು ಹೊಂದಿರುವವರ ಮೇಲೆ ತೀವ್ರ ನಿಗಾ ವಹಿಸುವಂತೆ ಎಚ್ಚರಿಕೆ ನೀಡಿದ್ದಾರೆ.

ಇಂಟಿಗ್ರೇಟೆಡ್ ಡಿಸೀಸ್ ಸರ್ವೆಲೆನ್ಸ್ ಯೋಜನೆ ಅಡಿಯಲ್ಲಿ ಹದಿಹರೆಯದವರು ಮತ್ತು ಮಕ್ಕಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಜೊತೆಗೆ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು ಮತ್ತು ಇತರೇ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಐಎಲ್‌ಐ ಮತ್ತು ಸಾರಿ ಪ್ರಕರಣಗಳು ಪತ್ತೆಯಾದಲ್ಲಿ, ಅಂತಹ ಪ್ರಕರಣಗಳ ಮಾಹಿತಿಯನ್ನ ಐಡಿಎಸ್‌ಪಿ-ಐಹೆಚ್‌ಐಪಿ ಪೋರ್ಟಲ್‌ನಲ್ಲಿ ಅಪ್‌ಲೋಡ್‌ ಮಾಡಬೇಕಾಗುತ್ತದೆ. ಅಲ್ಲದೇ ಗಂಟಲು ದ್ರವ ಮತ್ತು ಸಾರಿ ಪ್ರಕರಣಗಳ ಪರೀಕ್ಷೆ ಕೈಗೊಳ್ಳಬೇಕು. ಅದರಲ್ಲೂ ಮಕ್ಕಳ ಮಾದರಿ ಪರೀಕ್ಷೆ ಮಾಡಿ ಮಾದರಿಗಳನ್ನು ವೈರಸ್ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯಗಳಿಗೆ ಕಳುಹಿಸಬೇಕು ಎಂದು ರಾಜ್ಯಗಳಿಗೆ ಸೂಚಿಸಿದ್ದಾರೆ.

ಚೀನಾದಲ್ಲಿ ವೈರಸ್‌ ಹೆಚ್ಚಾಗಿ ಹರಡುತ್ತಿದ್ದು, ಮಕ್ಕಳು ಅನಾರೋಗ್ಯಕ್ಕೆ ಗುರಿಯಾಗುತ್ತಿದ್ದಾರೆ. ನ್ಯೂಮೋನಿಯಾ ಮಾದರಿಯ ಲಕ್ಷಣಗಳುಳ್ಳ ಈ ವೈರಸ್‌ ನೇರವಾಗಿ ಶ್ವಾಸಕೋಶದ ಮೇಲೆ ಪರಿಣಾಮ ಬೀರಲಿದ್ದು, ಉಸಿರಾಟದ ಸಮಸ್ಯೆ ಉಂಟಾಗುತ್ತದೆ. ಆದ್ದರಿಂದ ಚೀನಾದಲ್ಲಿ ಈಗಾಗಲೇ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಆಸ್ಪತ್ರೆಗಲ್ಲಿ ಹಾಸಿಗೆಗಳೂ ಫಿಲ್‌ ಆಗುತ್ತಿವೆ. ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಕೇಂದ್ರ ನಿಗಾ ವಹಿಸಿದೆ.

ಇದರಿಂದ ಆತಂಕ ಹೆಚ್ಚಾಗಿದ್ದು, ಬೆಂಗಳೂರಿನಲ್ಲಿ ಬಿಬಿಎಂಪಿ ಕೂಡ ಕಟ್ಟೆಚ್ಚರ ವಹಿಸಲು ಮುಂದಾಗಿದೆ. ಈಗಾಗಲೇ ಕೋವಿಡ್ ಸಾಂಕ್ರಾಮಿಕ ಕಾಲವನ್ನ ಎದುರಿಸಿರುವ ಬಿಬಿಎಂಪಿ ನ್ಯುಮೋನಿಯಾ ಮಾದರಿಯ ವೈರಸ್ ಬಗ್ಗೆ ಕಟ್ಟೆಚ್ಚರ ವಹಿಸಲು ಬಿಬಿಎಂಪಿ ಆಸ್ಪತ್ರೆಗಳು ಮತ್ತು ನಗರ ಪ್ರಾಥಮಿಕ ಚಿಕಿತ್ಸಾ ಕೇಂಗಳಲ್ಲಿ ನಿಗಾ ವಹಿಸುವಂತೆ ನಿಗಾವಹಿಸುವಂತೆ ಸೂಚನೆ ನೀಡಿದೆ. ಸದ್ಯ ಚಳಿಗಾಲ ಆಗಿರುವುದರಿಂದ ಆಸ್ಪತ್ರೆಗೆ ದಾಖಲಾಗುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಾಗ್ತಿದೆ. ಅದ್ರಲ್ಲೂ ನ್ಯುಮೋನಿಯಾ ಖಾಯಿಲೆಯಿಂದ ಬಳಲುವ ಮಕ್ಕಳ ವರದಿ ಕೇಳುತ್ತಿದೆ.

Pneumonia type fever has appeared in China after Corona. It is more common in children. The World Health Organization has also brought a report from China. The Secretary of the Union Ministry of Health has written to the States and Union Territories. He has directed to take steps to increase basic facilities like beds, medicines, influenza vaccines, oxygen, antibiotics, personal safety devices and test kits in hospitals.

ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 11-04-2025 | ಕೆಲವು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ | ಮುಂದಿನ 10 ದಿನಗಳವರೆಗೂ ಮಳೆ ಅಲ್ಲಲ್ಲಿ ಮಳೆಯ ಸಾಧ್ಯತೆ

ಅಲ್ಲಲ್ಲಿ ಗುಡುಗು ಸಹಿತ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮುಂದಿನ…

5 hours ago

ಪರಿಸರಕ್ಕೆ ಕೊಡುಗೆಯಾಗಬಹುದು ಅಡಿಕೆ ಮರ | ಅಡಿಕೆ ಮರಕ್ಕೆ ಮೌಲ್ಯ ತರಲು ಒಂದು ದಾರಿ | ಒಂದು ಮರಕ್ಕೆ ಕನಿಷ್ಟ 700 ರೂಪಾಯಿ ಪಡೆಯಬಹುದು ಹೇಗೆ ?

ಪರಿಸರ ಪ್ರೇಮಿಗಳಿಗೆ, ನಗರದಲ್ಲಿ ಹೂವು, ಸಣ್ಣ ಸಣ್ಣ ಗಿಡ ಬೆಳೆಸುವವರಿಗೆ ಹೂಕುಂಡವಾಗಿ ಅಡಿಕೆಯ…

9 hours ago

2026 ರ ವೇಳೆಗೆ ತುಮಕೂರಿಗೆ ಎತ್ತಿನಹೊಳೆ ನೀರು

2026 ಜೂನ್ ವೇಳೆಗೆ ಎತ್ತಿನಹೊಳೆ ನೀರು ತುಮಕೂರು ತಲುಪಲಿದೆ ಎಂದು ಗೃಹ ಸಚಿವ…

10 hours ago

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಒಂದೆರೆಡು ಕಡೆ ಮಳೆಯಾಗಿದೆ. ಉತ್ತರ ಕನ್ನಡ, ಉಡುಪಿ,…

11 hours ago

ಹಾವೇರಿ ಜಿಲ್ಲೆಯಲ್ಲಿ ಬಾಡಿಗೆ ಕೊಳವೆಬಾವಿಗಳಿಂದ ನೀರು ಪೂರೈಕೆ

ಹಾವೇರಿ ಜಿಲ್ಲೆಯಲ್ಲಿರುವ 17 ಗ್ರಾಮ ಪಂಚಾಯಿತಿ ವ್ಯಾಪ್ತಿಯ 18 ಗ್ರಾಮಗಳಿಗೆ 21 ಬಾಡಿಗೆ…

11 hours ago

ಶುಕ್ರ ನೇರ ಸಂಚಾರದ ಪರಿಣಾಮ : ಕೆಲ ರಾಶಿಗಳ ಮೇಲೆ ಪ್ರಭಾವ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 hours ago