ಹೊಸ ವರ್ಷಾರಣೆಯ ಸಂದರ್ಭದಲ್ಲಿ ಬೆಂಗಳೂರಿನ ಬಿಬಿಎಂಪಿ ಪೂರ್ವ ವಲಯದ ಮಹಾತ್ಮಗಾಂಧಿ ರಸ್ತೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಮಾರು 15 ಮೆಟ್ರಿಕ್ ಟನ್ ತ್ಯಾಜ್ಯ-ಅನುಪಯುಕ್ತ ವಸ್ತುಗಳನ್ನು ಸಂಗ್ರಹಿಸಲಾಗಿದೆ. ಪೂರ್ವ ವಲಯ ಆಯುಕ್ತ ಸ್ನೇಹಲ್, ಬಿ.ಎಸ್.ಡಬ್ಲ್ಯೂ.ಎಂ.ಎಲ್ ನ ಪ್ರಧಾನ ವ್ಯವಸ್ಥಾಪಕರಾದ ಬಸವರಾಜ್ ಕಬಾಡೆ ನೇತೃತ್ವದಲ್ಲಿ ರಸ್ತೆಗಳಲ್ಲಿ ಬಿದ್ದಿದ್ದ ತ್ಯಾಜ್ಯವನ್ನು ವಿಲೇವಾರಿ ಮಾಡಲಾಗಿದೆ. ಮಹಾತ್ಮಗಾಂಧಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ತ್ರೀಟ್, ರಿಸಿಡೆನ್ಸಿ ರಸ್ತೆ, ರಿಚ್‌ಮಂಡ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಕಸ್ತೂರ್ ಬಾ ರಸ್ತ್ತೆ ಸೇರಿದಂತೆ ಮುಂತಾದ ರಸ್ತೆಗಳಲ್ಲಿ ಮುಂಜಾನೆ 3 ರಿಂದ ಸ್ವಚ್ಛತಾ ಕಾರ್ಯ ಆರಂಭಿಸಿ ಬೆಳಗ್ಗೆ7 ವೇಳೆಗೆ ಪೂರ್ಣಗೊಳಿಸಲಾಗಿದೆ. ಸುಮಾರು 15 ಮೆಟ್ರಿಕ್ ಟನ್ ತ್ಯಾಜ್ಯವನ್ನು ಬೀದಿಗಳಿಂದ ತೆರವುಗೊಳಿಸಿ ರಸ್ತೆಗಳನ್ನು ಸ್ವಚ್ಛಗೊಳಿಸಿ ನಾಗರಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. 70 ಕ್ಕೂ ಹೆಚ್ಚು ಪೌರಕಾರ್ಮಿಕರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement