ಮುಂದಿನ ಮೂರು ತಿಂಗಳಲ್ಲಿ ಪ್ರಕೃತಿ ವಿಕೋಪ, ಮತಾಂಧತೆ, ಅಶಾಂತಿ, ಕಲಹ ಹೆಚ್ಚಾಗಲಿದೆ. ನಾಡಿನಲ್ಲಿ ಅಶಾಂತಿ ಹೆಚ್ಚಾಗಲಿದೆ.ಪಾರ್ಶ್ವವಾಯು, ಹೃದಯಾಘಾತ ಈ ಕಾಯಿಲೆ ಹೆಚ್ಚಾಗಿ ಜನ ಸಾಯುತ್ತಾರೆ. ಭವಿಷ್ಯದಲ್ಲಿ ಜಗತ್ತಿನ ಇತಿಹಾಸದಲ್ಲೇ ಇಂತಹ ರೋಗ ಬಂದಿಲ್ಲ. ಮನುಷ್ಯನಿಗೆ ಪ್ರಕೃತಿ, ಮಳೆಯಿಂದ ಸಮಸ್ಯೆಗಳಾಗುತ್ತವೆ. ಗುಡ್ಡಗಳು ಕುಸಿತ. ಭೂಕಂಪ ಹೆಚ್ಚಾಗುವ ಲಕ್ಷಣ ಇದೆ. ಜನ ಕಷ್ಟ ಬಂದಾಗ ಮಾತ್ರ ದೇವರು, ಮಠ ಮಂದಿರ ಎನ್ನುತ್ತಾರೆ… ಹೀಗೆಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.
ಮಳೆ, ರೋಗದಿಂದ ಭೂಮಿಯಿಂದ ದೇಶಕ್ಕೆ ತೊಂದರೆಯಾಗುತ್ತದೆ. ಹಿಂದೆ ನುಡಿದ ಮಾತಿನಂತೆ ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ. ಇದು ಕಾರ್ತಿಕ ಮಾಸದಲ್ಲಿ ತೊಂದರೆಯಾಗುವ ಲಕ್ಷಣ ಇದೆ . ಪ್ರಾರಂಭದಲ್ಲೇ ನಾನು ಹೇಳಿದಂತೆ ಮಳೆ, ಬೆಂಕಿಯಿಂದ ಕಾಟ, ಮತಾಂಧತೆ ಹೆಚ್ಚಳ, ಸಾವು ನೋವುಗಳಾಗುತ್ತವೆ. ಭೂಮಿ ನಡುಗುತ್ತದೆ, ಕುಸಿಯುತ್ತದೆ ಕೊರೊನಾ ರೋಗ ಹೆಚ್ಚಾಗುತ್ತವೆ. ಜನ ಅಶಾಂತಿಯಿಂದ ಇರುತ್ತಾರೆ ಎಂದು ಹೇಳಿದ್ದೆ ಇದೆಲ್ಲಾ ನಿಜವಾಗಿದೆ ಎಂದು ಸ್ವಾಮೀಜಿ ಒಂದೆಡೆ ಪ್ರಕೃತಿ ವಿಕೋಪ, ಮತಾಂದತೆ ಹೆಚ್ಚಾಗಿ ಅಶಾಂತಿ, ಕಲಹಗಳು ಹೆಚ್ಚಾಗಿ ಜನಮನವನ್ನು ಶಾಂತಿ ಕದಡುವ ಕೆಲಸ ಆಗುತ್ತದೆ. ಈಗ ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ಚುನಾವಣೆ ಕಾಲದಲ್ಲಿ ಈ ಬಗ್ಗೆ ಹೇಳುತ್ತೇನೆ. ಇನ್ನೊಂದು ವರ್ಷದಲ್ಲಿ ಕೊರೊನಾ ಹೋಗುತ್ತದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.
ಜನವರಿವರೆಗೂ ಕೊರೊನಾ ಹೆಚ್ಚು ಹರಡುವ ಕಾಲವಿದೆ. ಇದು ಮತ್ತೊಂದು ರೂಪವಾಗುವ ಲಕ್ಷಣವೂ ಇದೆ ಎಂದು ಕೋಡಿ ಶ್ರೀ ಹೇಳಿದರು. ರಾಜ್ಯ ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ಅದಕ್ಕೇಕೆ ನಾನು ಅಪಶಕುನ ನುಡಿಯುವುದು ಬೇಡ. ಮುಂದಿನ ದಿನಗಳಲ್ಲಿ ವಿಧಾನಸಭೆ ಚುನಾವಣೆ ಬಗ್ಗೆ ಹೇಳುತ್ತೇನೆ. ಅದನ್ನು ಯುಗಾದಿ ಫಲದ ಮೇಲೆ ಹೇಳುತ್ತೇನೆ ಎಂದಿದ್ದಾರೆ.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…