ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) 2024-25ನೇ ಹಣಕಾಸು ವರ್ಷದಲ್ಲಿ 5150 ಕಿ.ಮೀ. ಹೆದ್ದಾರಿ ನಿರ್ಮಾಣ ಗುರಿಯನ್ನು ಹೊಂದಿತ್ತು. ಆದರೆ ಅದಕ್ಕೂ ಮೀರಿದ ಸಾಧನೆಯನ್ನು ಮಾಡಿದೆ. ಈ ವರ್ಷ 5600 ಕಿ.ಮೀ. ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಿಸಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ನೀಡಿದ ಹೇಳಿಕೆಯೊಂದರಲ್ಲಿ, ರಾಷ್ಟ್ರೀಯ ಹೆದ್ದಾರಿ ಮೂಲಸೌಕರ್ಯ ಅಭಿವೃದ್ಧಿಗಾಗಿ ಯೋಜನಾ ವೆಚ್ಚವು 2 ಲಕ್ಷ 40 ಸಾವಿರ ಕೋಟಿ ರೂಪಾಯಿ ಗುರಿ ಇರಿಸಿಕೊಂಡಿತ್ತು, ಆದರೆ 2 ಲಕ್ಷ 50 ಸಾವಿರ ಕೋಟಿ ರೂಪಾಯಿಗಳಿಗಿಂತ ಹೆಚ್ಚಿನ ಗರಿಷ್ಠಮಟ್ಟವನ್ನು ತಲುಪಿದೆ ಎಂದು ತಿಳಿಸಿದೆ.
ಹಿಂದಿನ ಹಣಕಾಸು ವರ್ಷ 2023-2024 ಕ್ಕೆ ಹೋಲಿಸಿದರೆ ವೆಚ್ಚವು ಸುಮಾರು 21 ಶೇಕಡಾ ಮತ್ತು 2022-23 ರ ಹಣಕಾಸು ವರ್ಷಕ್ಕೆ ಹೋಲಿಸಿದರೆ ಸುಮಾರು 45 ಶೇಕಡಾ ಹೆಚ್ಚಾಗಿದೆ. 2024-25 ರ ಹಣಕಾಸು ವರ್ಷದಲ್ಲಿ, NHAI ಹಣಗಳಿಕೆಗಾಗಿ ಮೂರು ವಿಧಾನಗಳನ್ನು ಬಳಸಿಕೊಂಡಿತು, ಅವುಗಳಲ್ಲಿ ಟೋಲ್ ಆಪರೇಟ್ ಟ್ರಾನ್ಸ್‌ಫರ್ (TOT), ಮೂಲಸೌಕರ್ಯ ಹೂಡಿಕೆ ಟ್ರಸ್ಟ್ (InvIT) ಮತ್ತು ಟೋಲ್ ಸೆಕ್ಯುರಿಟೈಸೇಶನ್ ಸೇರಿವೆ.
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…