ಕಳೆದ ವರ್ಷ ಭಾರಿ ಸದ್ದು ಮಾಡಿತ್ತು, ಮಂಗಳೂರಿನಲ್ಲಿ ಆಟೋದಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ. ಕಳೆದ ಒಂದು ವರ್ಷದಿಂದ ರಾಷ್ಟ್ರೀಯ ತನಿಖಾದ ಸಂಸ್ಥೆ ಆರೋಪಿಗಾಗಿ ಶೋಧ ನಡೆಸುತ್ತಿತ್ತು. ಇದೀಗ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚು ರೂಪಿಸಿದ್ದ ಐಸಿಸ್ ಉಗ್ರ ಸಂಘಟನೆಯ ಸಂಚುಕೋರ, ಕರ್ನಾಟಕದ ಶಿವಮೊಗ್ಗ ಮೂಲದ ಅರಾಫತ್ ಅಲಿಯನ್ನು ರಾಷ್ಟ್ರೀಯ ತನಿಖಾದ ಸಂಸ್ಥೆ ಬಂಧಿಸಿದೆ.
ಕೀನ್ಯಾ ರಾಜಧಾನಿ ನೈರೋಬಿಯಿಂದ ಆತ ದೆಹಲಿಗೆ ಬಂದಿಳಿಯುತ್ತಿದ್ದಂತೆ ಆತನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದೆ. ಅಲಿ 2020 ರಿಂದ ಐಸಿಸ್ ಮೂಲಕ ಭಯೋತ್ಪಾದಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ. ಭಾರತದಲ್ಲಿ ನೆಲೆಸದೇ ಇದ್ದರೂ ಐಎಸ್‌ನ ಭಾರತ ವಿರೋಧಿ ಭಯೋತ್ಪಾದಕ ಅಜೆಂಡಾವನ್ನು ಉತ್ತೇಜಿಸಲು ವಿದೇಶದಿಂದ ಕಾರ್ಯಾಚರಣೆ ನಡೆಸುತ್ತಿದ್ದ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel