ಬುಧವಾರ ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಎನ್‌ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಿಹಾರದಲ್ಲಿ ನಡೆದಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ವೇಳೆ ದುಷ್ಕೃತ್ಯಕ್ಕೆ ನಡೆಸಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ ಹಲವರ ಮನೆ, ಕಚೇರಿಗಳು, ಆಸ್ಪತ್ರೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಮಾರ್ಚ್ ತಿಂಗಳಲ್ಲಿ ಬಂಟ್ವಾಳ ತಾಲೂಕಿನ ನಂದಾವರದಲ್ಲಿ ದಾಳಿ ನಡೆಸಿದ್ದರು. ವಿಧ್ವಂಸಕ ಕೃತ್ಯ ಎಸಗಲು ಹಣಕಾಸಿನ ನೆರವು ಒದಗಿಸಿರಬಹುದು ಎಂಬ ಗುಮಾನಿಯ ಮೇರೆಗೆ ಬಂಟ್ವಾಳ ಮೂಲದ ಮಹಮ್ಮದ್ ಸಿನಾನ್, ಸಜಿಪ ಮೂಡದ ಸರ್ಫ್ರಾಜ್ ನವಾಜ್, ಇಕ್ಬಾಲ್, ಪುತ್ತೂರಿನ ಅಬ್ದುಲ್ ರಫೀಕ್ ನಾಲ್ವರ ಮನೆ ಮೇಲೆ ದಾಳಿ ಮಾಡಿ ಬಂಧಿಸಿದ್ದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel