ದೇಶದ ವಿವಿದೆಡೆ ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಕಚೇರಿ ಹಾಗೂ ಮುಖಂಡರ ನಿವಾಸಿಗಳ ಮೇಲೆ ಎರಡನೇ ಬಾರಿಗೆ ದಾಳಿ ನಡೆದಿದೆ. ಕ್ರೈ ಬ್ರಾಂಚ್ ಪೊಲೀಸರು ಹಾಗೂ ಎನ್ ಐ ಎ ತಂಡ ದಾಳಿ ಹಲವು ಕಡೆ ದಾಳಿ ನಡೆಸಿದೆ ಎಂದು ವರದಿಯಾಗಿದೆ.
ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ ಹಾಗೂ ಮುಖಂಡರ ನಿವಾಸಿಗಳ ಮೇಲೆ ಪೊಲೀಸರು ದಾಳಿ ನಡೆಸುತ್ತಿದ್ದಾರೆ. ಕರ್ನಾಟಕದಲ್ಲಿ ಮಂಗಳೂರು, ಚಿಕ್ಕಮಗಳೂರು, ಉಡುಪಿ ಸೇರಿದಂತೆ ಹಲವು ಕಡೆ ದಾಳಿ ನಡೆದಿದೆ. ಮಹಾರಾಷ್ಟ್ರದಲ್ಲಿ ನಾಸಿಕ್ ಪೊಲೀಸ್ ಕ್ರೈಂ ಬ್ರಾಂಚ್ ವಿಭಾಗವು ಆಲ್ ಇಂಡಿಯಾ ಇಮಾಮ್ ಕೌನ್ಸಿಲ್‌ನ ರಾಜ್ಯ ಮುಖ್ಯಸ್ಥರನ್ನು ಬಂಧಿಸಿದೆ. ಥಾಣೆ, ನಾಸಿಕ್ ಮತ್ತು ಮಾಲೆಗಾಂವ್ ಸೇರಿದಂತೆ ಮಹಾರಾಷ್ಟ್ರ ರಾಜ್ಯದ ವಿವಿಧ ಸ್ಥಳಗಳಲ್ಲಿ ಕೇಂದ್ರ ತನಿಖಾ ಸಂಸ್ಥೆ ಮತ್ತು ರಾಜ್ಯ ಭಯೋತ್ಪಾದನಾ ನಿಗ್ರಹ ದಳದಿಂದ ದಾಳಿ ನಡೆಯುತ್ತಿದೆ.ಸುಮಾರು 40 ಜನರನ್ನು ಬಂಧಿಸಲಾಗಿದೆ. ಪಿಎಫ್ ಐ ದೇಶದಲ್ಲಿ ಉಗ್ರ ಚಟುವಟಿಕೆಗಳಿಗೆ ನಿಧಿ ಸಂಗ್ರಹ ಮಾಡುತ್ತಿದೆ. ಅರಬ್ ದೇಶದಿಂದ ಅಕ್ರಮವಾಗಿ ಹಣ ಪಡೆಯುತ್ತಿದೆ ಎಂಬುದು ಸೇರಿದಂತೆ ಹಲವು ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಎನ್ ಐಎ ದಾಳಿ ನಡೆಸಿದೆ. ಅಸ್ಸಾಂ, ಉತ್ತರ ಪ್ರದೇಶ, ದೆಹಲಿ, ಮಧ್ಯಪ್ರದೇಶ ಮತ್ತು ಕರ್ನಾಟಕ ಸೇರಿದಂತೆ ಇತರ ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲೂ ದಾಳಿ ನಡೆಸಲಾಗುತ್ತಿದೆ.
ಕರ್ನಾಟಕದಲ್ಲಿ ಎಸ್‌ಡಿಪಿಐ ಪ್ರಮುಖರನ್ನು ಸೇರಿದಂತೆ ಸುಮಾರು 80 ರಿಂದ 90 ಪಿಎಫ್‌ಐ ಮತ್ತು ಎಸ್‌ಡಿಪಿಐ ಕಾರ್ಯಕರ್ತರು ಮತ್ತು ಮುಖಂಡರನ್ನು ಮುನ್ನೆಚ್ಚರಿಕೆಯಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ರಾಜ್ಯಾದ್ಯಂತ ಪೊಲೀಸ್ ದಾಳಿ ನಡೆಯುತ್ತಿದೆ. ಸೆಕ್ಷನ್ 108, 151 ಸಿಆರ್‌ಪಿಸಿ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…