ದೇಶದಾದ್ಯಂತ ಪಿಎಫ್‌ಐ ಕಚೇರಿಗಳ ಮೇಲೆ ಎನ್‌ಐಎ ಹಾಗೂ ಇಡಿ ದಾಳಿ | 100 ಕ್ಕೂ ಹೆಚ್ಚು ಪಿಎಫ್‌ಐ ಸದಸ್ಯರು ವಶಕ್ಕೆ | ಮಂಗಳೂರಿನಲ್ಲಿಯೂ ದಾಳಿ |

September 22, 2022
8:50 AM

ವಿವಿಧ ಪ್ರಕರಣಗಳಿಗೆ ಸಂಬಂಧಿಸಿ  ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಕಚೇರಿಗಳ ಮೇಲೆ ಹಾಗೂ ಪ್ರಮುಖ ನಾಯಕರ ಮನೆಗೆ ರಾಷ್ಟ್ರೀಯ ತನಿಖಾ ದಳ (NIA) ಹಾಗೂ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿದೆ. ದೇಶದಾದ್ಯಂತ ಸುಮಾರು 100 ಮಂದಿ ಪಿಎಫ್‌ಐ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.  ಆಂಧ್ರಪ್ರದೇಶ, ತೆಲಂಗಾಣ, ಉತ್ತರ ಪ್ರದೇಶ, ಕೇರಳ, ಕರ್ನಾಟಕ, ತಮಿಳುನಾಡು ಮತ್ತು ಹಲವು ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ.

Advertisement
Advertisement

ಹಿಂದೂ ಸಂಘಟನೆಯ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ನಂತರ ವಿವಿಧ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ತನಿಖೆ ನಡೆಯುತ್ತಿತ್ತು. ಇದೀಗ ಮಂಗಳೂರು ಸೇರಿದಂತೆ ದೇಶದ ಹಲವು ಕಡೆ ಏಕಕಾಲಕ್ಕೆ ದಾಳಿ ನಡೆದಿದೆ. ಬೆಳಗ್ಗೆ 3.30 ಕ್ಕೆ ಕೆಲವು ಕಡೆ ದಾಳಿ ಆರಂಭವಾಗಿದೆ. ಮಂಗಳೂರಿನಲ್ಲಿರುವ ಎಸ್ ಡಿಪಿಐ ಹಾಗೂ ಪಿಎಫ್ ಐ ಜಿಲ್ಲಾ ಕಚೇರಿಗಳ ಮೇಲೆ ದಾಳಿ ನಡೆಸಿದೆ.

Advertisement

ಈಗಾಗಲೇ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಹಲವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.  ಕೇಂದ್ರ ಗೃಹ ಸಚಿವಾಲಯ ಕೂಡ ಈ ಕಾರ್ಯಾಚರಣೆಯ ಮೇಲೆ ನಿಗಾ ಇರಿಸಿದೆ. ಇಬ್ಬರು ಪಿಎಫ್‌ಐ ಸದಸ್ಯರನ್ನು ಲಕ್ನೋದಿಂದ ಬಂಧಿಸಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಕೇರಳದ ಮಲಪ್ಪುರಂ ಜಿಲ್ಲೆಯ ಮಂಜೇರಿಯಲ್ಲಿರುವ ಪಿಎಫ್‌ಐ ಅಧ್ಯಕ್ಷ  ಸಲಾಂ ಅವರ ಮನೆ ಸೇರಿದಂತೆ ಪಿಎಫ್‌ಐ ಮುಖಂಡರ ಮನೆ ಮತ್ತು ಪಿಎಫ್‌ಐ ಕಚೇರಿಗಳ ಮೇಲೆ ಮಧ್ಯರಾತ್ರಿಯಿಂದ ಎನ್‌ಐಎ ಮತ್ತು ಇಡಿ ದಾಳಿ ನಡೆಸುತ್ತಿದೆ, 9 ಜನರನ್ನು ವಶಕ್ಕೆ ಪಡೆದಿದೆ ಎಂದು ಮೂಲಗಳು ತಿಳಿಸಿವೆ. ದಾಳಿ ನಡೆಯುತ್ತಿದ್ದಂತೆಯೇ ಎಲ್ಲೆಡೆಯೂ  ಪಿಎಫ್‌ಐ ಹಾಗೂ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

 

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |
April 28, 2024
9:26 PM
by: ಪ್ರಬಂಧ ಅಂಬುತೀರ್ಥ
ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ
April 28, 2024
9:24 PM
by: The Rural Mirror ಸುದ್ದಿಜಾಲ
ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |
April 28, 2024
4:55 PM
by: The Rural Mirror ಸುದ್ದಿಜಾಲ
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |
April 28, 2024
4:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror