ವಿವಿಧ ಪ್ರಕರಣಗಳಿಗೆ ಸಂಬಂಧಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಕಚೇರಿಗಳ ಮೇಲೆ ಹಾಗೂ ಪ್ರಮುಖ ನಾಯಕರ ಮನೆಗೆ ರಾಷ್ಟ್ರೀಯ ತನಿಖಾ ದಳ (NIA) ಹಾಗೂ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿದೆ. ದೇಶದಾದ್ಯಂತ ಸುಮಾರು 100 ಮಂದಿ ಪಿಎಫ್‌ಐ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. ಆಂಧ್ರಪ್ರದೇಶ, ತೆಲಂಗಾಣ, ಉತ್ತರ ಪ್ರದೇಶ, ಕೇರಳ, ಕರ್ನಾಟಕ, ತಮಿಳುನಾಡು ಮತ್ತು ಹಲವು ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ.
ಹಿಂದೂ ಸಂಘಟನೆಯ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ನಂತರ ವಿವಿಧ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ತನಿಖೆ ನಡೆಯುತ್ತಿತ್ತು. ಇದೀಗ ಮಂಗಳೂರು ಸೇರಿದಂತೆ ದೇಶದ ಹಲವು ಕಡೆ ಏಕಕಾಲಕ್ಕೆ ದಾಳಿ ನಡೆದಿದೆ. ಬೆಳಗ್ಗೆ 3.30 ಕ್ಕೆ ಕೆಲವು ಕಡೆ ದಾಳಿ ಆರಂಭವಾಗಿದೆ. ಮಂಗಳೂರಿನಲ್ಲಿರುವ ಎಸ್ ಡಿಪಿಐ ಹಾಗೂ ಪಿಎಫ್ ಐ ಜಿಲ್ಲಾ ಕಚೇರಿಗಳ ಮೇಲೆ ದಾಳಿ ನಡೆಸಿದೆ.
ಈಗಾಗಲೇ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಹಲವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಕೇಂದ್ರ ಗೃಹ ಸಚಿವಾಲಯ ಕೂಡ ಈ ಕಾರ್ಯಾಚರಣೆಯ ಮೇಲೆ ನಿಗಾ ಇರಿಸಿದೆ. ಇಬ್ಬರು ಪಿಎಫ್‌ಐ ಸದಸ್ಯರನ್ನು ಲಕ್ನೋದಿಂದ ಬಂಧಿಸಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಕೇರಳದ ಮಲಪ್ಪುರಂ ಜಿಲ್ಲೆಯ ಮಂಜೇರಿಯಲ್ಲಿರುವ ಪಿಎಫ್‌ಐ ಅಧ್ಯಕ್ಷ ಸಲಾಂ ಅವರ ಮನೆ ಸೇರಿದಂತೆ ಪಿಎಫ್‌ಐ ಮುಖಂಡರ ಮನೆ ಮತ್ತು ಪಿಎಫ್‌ಐ ಕಚೇರಿಗಳ ಮೇಲೆ ಮಧ್ಯರಾತ್ರಿಯಿಂದ ಎನ್‌ಐಎ ಮತ್ತು ಇಡಿ ದಾಳಿ ನಡೆಸುತ್ತಿದೆ, 9 ಜನರನ್ನು ವಶಕ್ಕೆ ಪಡೆದಿದೆ ಎಂದು ಮೂಲಗಳು ತಿಳಿಸಿವೆ. ದಾಳಿ ನಡೆಯುತ್ತಿದ್ದಂತೆಯೇ ಎಲ್ಲೆಡೆಯೂ ಪಿಎಫ್‌ಐ ಹಾಗೂ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…