ದ.ಕ ಹಾಗೂ ಉಡುಪಿ ಜಿಲ್ಲೆಯ ಹಲವು ಕಡೆಗಳಲ್ಲಿ ಸೋಮವಾರ ತಡರಾತ್ರಿ ಮತ್ತೆ ಎನ್ಐಎ (NIA) ದಾಳಿ ನಡೆಸಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಹಲವು ಮಂದಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ತಲಪಾಡಿ, ಮಂಗಳೂರು ಹಾಗೂ ಗ್ರಾಮಾಂತರ ಭಾಗಗಳಿಂದ ಮತ್ತು ಉಡುಪಿ ಜಿಲ್ಲೆಯ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿದೆ ಎಂದು ಮಾಹಿತಿ ಲಭ್ಯವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಮಂದಿಯನ್ನು ಸೆಕ್ಷನ್ 107, 157 ಕಾಯ್ದೆಯಡಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel