ಕರ್ನಾಟಕದಲ್ಲಿ ಡೆಂಗ್ಯು ಭೀತಿಯ ನಡುವೆ ಕೇರಳದಲ್ಲಿ ನಿಫಾ ವೈರಸ್ ಆತಂಕ ಎದುರಾಗಿದೆ. ಕೇರಳದ ಮಲಪ್ಪುರಂನಲ್ಲಿ ನಿಫಾ ವೈರಸ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ 14 ವರ್ಷದ ಬಾಲಕ ಮೃತಪಟ್ಟಿದ್ದಾನೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ಈ ಬೆನ್ನಲ್ಲೇ ಸೋಂಕು ತಡೆಗೆ ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ (ಐಸಿಎಂಆರ್) ತಂಡ ಕೋಯಿಕ್ಕೋಡ್ಗೆ ಆಗಮಿಸಿದೆ. ಬಾಲಕನ ಸಂಪರ್ಕದಲ್ಲಿದ್ದ 13 ಜನರ ಸೀರಮ್ ಪರೀಕ್ಷೆಯ ಫಲಿತಾಂಶಗಳಿಗಾಗಿ ಕಾಯಲಾಗುತ್ತಿದೆ.
ಭಾರತೀಯ ವೈದ್ಯಕೀಯ ಸಂಶೋಧನಾ (ಐಸಿಎಂಆರ್) ತಂಡದಲ್ಲಿ ನಾಲ್ವರು ವೈದ್ಯರು ಮತ್ತು ಇಬ್ಬರು ತಂತ್ರಜ್ಞರು ಇದ್ದು, ಇವರು ಸೋಂಕಿತ ತಡೆ ವಿಧಾನ, ಪರೀಕ್ಷೆ ಸೌಲಭ್ಯ ಮತ್ತು ಚಿಕಿತ್ಸೆ ಪ್ರಕ್ರಿಯೆ ಕುರಿತು ರಾಜ್ಯ ಆರೋಗ್ಯ ಇಲಾಖೆ ಜೊತೆಗೆ ಕಾರ್ಯ ನಿರ್ವಹಿಸಲಿದ್ದಾರೆ. ಪ್ರಸ್ತತ, ಕೋಯಿಕ್ಕೋಡ್ನ ವೈದ್ಯಕೀಯ ಕಾಲೇಜಿನಲ್ಲಿ ದಾಖಲಾಗಿರುವ 68 ವರ್ಷದ ವ್ಯಕ್ತಿಯಲ್ಲಿ ನಿಫಾ ಸೋಂಕಿನ ಸಂಶಯ ಎದುರಾಗಿದೆ. ಅವರ ಪ್ರಾಥಮಿಕ ಪರೀಕ್ಷೆಗಳಲ್ಲಿ ನೆಗೆಟಿವ್ ಬಂದಿದ್ದು, ಐಸಿಯುನಲ್ಲಿರುವ ಅವರ ಮೇಲೆ ಹೆಚ್ಚಿನ ನಿಗಾವಹಿಸಲಾಗಿದೆ. 350 ಜನರ ಸ್ಯಾಂಪಲ್ ತೆಗೆಯಲಾಗಿದೆ. ಈ ಪೈಕಿ ನಾಲ್ವರು ತಿರುವನಂತಪುರಂ ಹಾಗೂ ಇಬ್ಬರು ಪಾಲಕ್ಕಾಡ್‌ನವರು.
ಕೇರಳದಲ್ಲಿ ಮತ್ತೆ ನಿಫಾ ವೈರಸ್ ಹೆಚ್ಚಾಗಿದೆ. ಈಗಾಗಲೇ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕೇರಳದಲ್ಲಿ ನಿಫಾ ವೈರಸ್ ಹೆಚ್ಚಾಗುತ್ತಿದ್ದಂತೆ ಕರ್ನಾಟಕದಲ್ಲೂ ಆತಂಕ ಶುರುವಾಗಿದೆ. ರಾಜ್ಯದಲ್ಲಿ ಈಗಾಗಲೇ ಡೆಂಗ್ಯು ಭೀತಿ ತಲೆದೂರಿದೆ. ಈ ಮಧ್ಯೆ ನಿಫಾ ವೈರಸ್ ಆತಂಕವೂ ಹೆಚ್ಚಾಗಿದೆ. ಇನ್ನು ಕರ್ನಾಟಕದಲ್ಲಿ ನಿಫಾ ವೈರಸ್ಗಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಕೇರಳಾದಿಂದ ಕರ್ನಾಟಕಕ್ಕೆ ದಿನನಿತ್ಯ ಸಂಚಾರ ಮಾಡುವ ಪ್ರಯಾಣಿಕರ ಮೇಲೆ ನಿಗಾ ಇಡಲಾಗಿದೆ.
ಲಕ್ಷಣಗಳು ಏನು..? ಮುಂಜಾಗ್ರತೆ ಏನು..? : ಈ ಸೋಂಕು ಬಾವಲಿ ಕಚ್ಚಿದ ಹಣ್ಣು ಸೇವನೆಯು ಈ ಸೋಂಕು ಹರಡುವಿಕೆಗೆ ಕಾರಣವಾಗಿದೆ. ಈ ಸೋಂಕು ಮಾನವರಲ್ಲಿ ಮೆದುಳಿನ ಉರಿಯೂತದೊಂದಿಗೆ ಮಾರಣಾಂತಿಕ ಜ್ವರಕ್ಕೆ ಕಾರಣವಾಗುತ್ತದೆ. ನಿಫಾ ಸಾಮಾನ್ಯ ಲಕ್ಷಣಗಳೆಂದರೆ ಜ್ವರ, ಕೆಮ್ಮು, ಉಸಿರಾಟ ಸಮಸ್ಯೆ, ಅತಿಸಾರ, ಆಯಾಸ, ವಾಂತಿ, ಸ್ನಾಯು ನೋವು ಮತ್ತು ಆಲಸ್ಯ. ಇನ್ನು ಕೆಲವರಲ್ಲಿ ಈ ಸೋಂಕಿನ ಲಕ್ಷಣಗಳು ಗೋಚರರಹಿತವಾಗಿರುತ್ತದೆ. ಸೋಂಕಿನಿಂದ ಸುರಕ್ಷೆ ಪಡೆಯಲು ಕೈಯ ಶುಚಿತ್ವ ಕಾಪಾಡುವುದು ಮುಖ್ಯ.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…