ರಾಜ್ಯದಾದ್ಯಂತ ಇಂದು ರಾತ್ರಿಯಿಂದ ನೈಟ್‌ ಕರ್ಫ್ಯೂ ಜಾರಿ : ಸಿ.ಎಂ. ಯಡಿಯೂರಪ್ಪ ಘೋಷಣೆ

December 23, 2020
1:20 PM

ಬ್ರಿಟನ್ ನಲ್ಲಿ ಪತ್ತೆಯಾಗಿರುವ ಹೊಸ ಮಾದರಿಯ ಕೊರೋನಾ ವೈರಸ್ ಭಾರತ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಭೀತಿ ಮೂಡಿಸಿದೆ. ಭಾರೀ ವೇಗದಲ್ಲಿ ಹಬ್ಬುವ ಹೊಸ ಮಾದರಿಯ ಕೊರೋನಾ ವೈರಸ್ ಬ್ರಿಟನ್ ನಲ್ಲಿ ಪತ್ತೆಯಾದ ಬಳಿಕ ಸಾವಿರಾರು ಮಂದಿ ಭಾರತಕ್ಕೆ ಆಗಮಿಸಿದ್ದು, ಅವರಿಂದ ಸಂಭಾವ್ಯ ಸೋಂಕು ಹರಡುವಿಕೆ ತಡೆಯುವ ಸಲುವಾಗಿ ಇಂದು ರಾತ್ರಿಯಿಂದಲೇ ಜ. 2ರವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ಇಂದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಜನವರಿ 2ರವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಕೋವಿಡ್ 19 ಹೊಸ ರೂಪಾಂತರದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ರಾತ್ರಿ 9ರ ನಂತರ ಬಸ್​ ಸಂಚಾರ ಇರುವುದಿಲ್ಲ. ಹೋಟೆಲ್​, ರೆಸ್ಟೋರೆಂಟ್​ಗಳೂ ಬಂದ್​ ಆಗಲಿವೆ. ವ್ಯಾಪಾರ, ವಹಿವಾಟಗಳೂ ನಡೆಯುವುದಿಲ್ಲ. ಅಗತ್ಯ ವಸ್ತುಗಳ ಸರಬರಾಜು ಮಾಡುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಇರಲಿದೆ. ಹಾಗೇ ಇಂದು ಸಂಜೆ 5ಗಂಟೆಯೊಳಗೆ ನೈಟ್​ ಕರ್ಫ್ಯೂ ಸಂಬಂಧಿತ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಲಿದೆ ಎಂದು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ
April 13, 2026
7:45 AM
by: ದ ರೂರಲ್ ಮಿರರ್.ಕಾಂ
ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
April 13, 2026
7:09 AM
by: ಮಿರರ್‌ ಡೆಸ್ಕ್
ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ
April 13, 2026
7:07 AM
by: ಮಿರರ್‌ ಡೆಸ್ಕ್
ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ
April 13, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror