ಭಾರತ-ಬಾಂಗ್ಲಾದೇಶ ಗಡಿಯಲ್ಲಿ ರಾತ್ರಿ ಕರ್ಫ್ಯೂ | ಅಡಿಕೆ ಕಳ್ಳಸಾಗಾಣಿಕೆ ಮೇಲೆ ನಿಯಂತ್ರಣ ಸಾಧ್ಯತೆ |

January 2, 2026
9:05 AM

ಬಾಂಗ್ಲಾದೇಶದಲ್ಲಿನ ಪ್ರಸ್ತುತ ಪರಿಸ್ಥಿತಿಯ ಅಪಾಯಗಳ ಬಗ್ಗೆ ಮುಂಜಾಗ್ರತಾ ಕ್ರಮವಾಗಿ ಭದ್ರತಾ ಕ್ರಮಗಳನ್ನು ಮೇಘಾಲಯದ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಬಿಗುಗೊಳಿಸಲಾಗಿದ್ದು ರಾತ್ರಿ ಕರ್ಫ್ಯೂ ವಿಧಿಸಿದೆ. ಪ್ರತಿದಿನ ಸಂಜೆ 6 ರಿಂದ ಬೆಳಿಗ್ಗೆ 5 ರವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಮೇಘಾಲಯ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲಾಡಳಿತವು ಘೋಷಿಸಿತು. ಅಂತರರಾಷ್ಟ್ರೀಯ ಗಡಿಯ 200 ಮೀಟರ್ ವ್ಯಾಪ್ತಿಯಲ್ಲಿ ಜಾರಿಯಲ್ಲಿರುತ್ತದೆ.

ಗಡಿ ಪ್ರದೇಶಗಳು ಅಕ್ರಮ ಒಳನುಸುಳುವಿಕೆ, ದಂಗೆಕೋರರ ಚಲನೆ ಮತ್ತು ಕಳ್ಳಸಾಗಣೆ ಚಟುವಟಿಕೆಗಳಿಗೆ, ವಿಶೇಷವಾಗಿ ರಾತ್ರಿಯ ಸಮಯದಲ್ಲಿ ಅವಕಾಶವಾಗುತ್ತಿದೆ. ಹೀಗಾಗಿ ಭದ್ರತಾ ಕ್ರಮಗಳನ್ನು ಅನುಸರಿಸಿ ಈ ನಿರ್ದೇಶನ ನೀಡಲಾಗಿದೆ. ಭಾರತ ಅಥವಾ ಬಾಂಗ್ಲಾದೇಶಕ್ಕೆ ಅಕ್ರಮ ಪ್ರವೇಶಕ್ಕಾಗಿ ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ಸಂಚಾರ,  ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಅನಧಿಕೃತವಾಗಿ ಸೇರುವುದು, ಗಡಿಯ ಬಳಿ ಕೋಲುಗಳು, ರಾಡ್‌ಗಳು, ಕಲ್ಲುಗಳು ಅಥವಾ ಇತರ  ಆಯುಧಗಳನ್ನು ಸಾಗಿಸುವುದು, ನಿಷಿದ್ಧ ಸರಕುಗಳು, ಅಡಿಕೆ, ಮೀನು, ಒಣ ಮೀನು, ಸಿಗರೇಟ್ ಮತ್ತು ಇತರ  ವಸ್ತುಗಳ ಕಳ್ಳಸಾಗಣೆಯನ್ನು ಕರ್ಫ್ಯೂ ನಿಷೇಧಿಸುತ್ತದೆ ಎಂದು ಅಲ್ಲಿನ ಪ್ರಕಟಣೆ ಹೇಳಿದೆ.

ಈಗಾಗಲೇ ಕಳ್ಳದಾರಿಯ ಮೂಲಕ ಬಾಂಗ್ಲಾದೇಶದಿಂದ ಬರುತ್ತಿರುವ ಅಡಿಕೆಯ ಮೇಲೆ ನಿರ್ಬಂಧ ಸಾಧ್ಯವಿದೆ. ಅಡಿಕೆ ಕಳ್ಳಸಾಗಾಣಿಕೆಯು ಮೇಘಾಲಯ, ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳ ಮೂಲಕ ಭಾರತದೊಳಕ್ಕೆ ಬರುತ್ತಿತ್ತು. ಈಚೆಗಷ್ಟೆ ಸಾಕಷ್ಟು ಪ್ರಮಾಣದಲ್ಲಿ ಅಡಿಕೆ ಕಳ್ಳ ಸಾಗಾಣಿಕೆ ಪ್ರಕರಣ ಬೆಳಕಿಗೆ ಬಂದಿತ್ತು.  ಇದೀಗ ರಾತ್ರಿ ಕರ್ಫ್ಯೂ ಅಡಿಕೆ ಕಳ್ಳಸಾಗಾಣಿಕೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಭಾರತದ ಅಡಿಕೆ ಮಾರುಕಟ್ಟೆ ಮೇಲೂ ಉತ್ತಮ ಪರಿಣಾಮ ಬೀರುವ ಸಾಧ್ಯತೆ ಇದೆ. ಹೊಸ ಅಡಿಕೆ ಧಾರಣೆ ಏರಿಕೆಗೂ ಕಾರಣವಾಗಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

(ಯು ಎನ್‌ ಐ)

The curfew prohibits movement across the Illegal activities, including smuggling of cattle, contraband goods, Arecanut, betel leaves, fish, dry fish, cigarettes, bidis, and other prohibited items…

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಇಳುವರಿ ಕುಸಿತ | ಮಿಶ್ರ ತೋಟಗಳಲ್ಲಿ ಹೆಚ್ಚು ಸಮಸ್ಯೆ…! ಯಾವ ತಳಿ ಆಯ್ಕೆ ಮಾಡಿದ್ದಾರೆ…? | ಅಡಿಕೆ ಇಳುವರಿ ಕುಸಿತದ ವಿಶ್ಲೇಷಣೆ
March 13, 2026
10:48 AM
by: ದ ರೂರಲ್ ಮಿರರ್.ಕಾಂ
ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror