ಬ್ರಿಟನ್ ನಲ್ಲಿ ಪತ್ತೆಯಾಗಿರುವ ಹೊಸ ಮಾದರಿಯ ಕೊರೋನಾ ವೈರಸ್ ಭಾರತ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಭೀತಿ ಮೂಡಿಸಿದೆ. ಭಾರೀ ವೇಗದಲ್ಲಿ ಹಬ್ಬುವ ಹೊಸ ಮಾದರಿಯ ಕೊರೋನಾ ವೈರಸ್ ಬ್ರಿಟನ್ ನಲ್ಲಿ ಪತ್ತೆಯಾದ ಬಳಿಕ ಸಾವಿರಾರು ಮಂದಿ ಭಾರತಕ್ಕೆ ಆಗಮಿಸಿದ್ದು, ಅವರಿಂದ ಸಂಭಾವ್ಯ ಸೋಂಕು ಹರಡುವಿಕೆ ತಡೆಯುವ ಸಲುವಾಗಿ ಇಂದು ರಾತ್ರಿಯಿಂದಲೇ ಜ. 2ರವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ಇಂದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಜನವರಿ 2ರವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಕೋವಿಡ್ 19 ಹೊಸ ರೂಪಾಂತರದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ರಾತ್ರಿ 9ರ ನಂತರ ಬಸ್ ಸಂಚಾರ ಇರುವುದಿಲ್ಲ. ಹೋಟೆಲ್, ರೆಸ್ಟೋರೆಂಟ್ಗಳೂ ಬಂದ್ ಆಗಲಿವೆ. ವ್ಯಾಪಾರ, ವಹಿವಾಟಗಳೂ ನಡೆಯುವುದಿಲ್ಲ. ಅಗತ್ಯ ವಸ್ತುಗಳ ಸರಬರಾಜು ಮಾಡುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಇರಲಿದೆ. ಹಾಗೇ ಇಂದು ಸಂಜೆ 5ಗಂಟೆಯೊಳಗೆ ನೈಟ್ ಕರ್ಫ್ಯೂ ಸಂಬಂಧಿತ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಲಿದೆ ಎಂದು ತಿಳಿಸಿದ್ದಾರೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…