ಅಡಿಕೆ(Arecanut Growers) ಬೆಳೆಗಾರರು ಹಳದಿ ಎಲೆರೋಗ ಹಾಗೂ ಎಲೆಚುಕ್ಕೆ ರೋಗದಿಂದ ಕಂಗಾಲಾಗಿದ್ದಾರೆ. ಹೀಗಾಗ ಸರ್ಕಾರವು ಅಡಿಕೆ ಬೆಳೆಗಾರರಿಗೆ ಆರ್ಥಿಕ ನೆರವು ನೀಡಲು ಮುಂದಾಗಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಸ್ವಾಮೀಜಿಗಳು, ಮಲೆನಾಡು ಪ್ರದೇಶದ ಹಾಗೂ ಇತರ ಜಿಲ್ಲೆಗಳ ಅಡಿಕೆ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಕೃಷಿಕರ ಜೀವನಾಧಾರವಾಗಿದ್ದ ಅಡಿಕೆ, ಕಾಫಿ, ಕಾಳು ಮೆಣಸಿನ ಬೆಳೆಗೆ ಹಾನಿಯಾಗಿದೆ. ಅಡಿಕೆ ಮರಗಳಿಗೆ ಹಲವು ದಶಕಗಳಿಂದ ಬಾಧಿಸುತ್ತಿರುವ ಹಳದಿ ಎಲೆ ರೋಗ, ಎಲೆ ಚುಕ್ಕೆ ರೋಗದಿಂದ ಕೃಷಿ ನಾಶವಾಗುತ್ತಿದೆ. ಹೀಗಾಗಿ ಅನೇಕ ಕುಟುಂಬಗಳು ಸಂಕಷ್ಟಕ್ಕೆ ಒಳಗಾಗಿವೆ. ಹೀಗಾಗಿ ರೋಗ ನಿಯಂತ್ರಣಕ್ಕೆ ಸೂಕ್ತ ಔಷಧ ಒದಗಿಸಿಕೊಡಬೇಕು ಹಾಗೂ ಆರ್ಥಿಕ ನೆರವು ಒದಗಿಸಬೇಕು ಎಂದು ನಿರ್ಮಲಾನಂದನಾಥ ಸ್ವಾಮೀಜಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…