ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯನ್ನು ಫೆಬ್ರವರಿ ಅಂತ್ಯದಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಬೆಂಗಳೂರು-ಮೈಸೂರು ಹೆದ್ದಾರಿಯ ಕಾಮಗಾರಿ ಫೆಬ್ರವರಿ ವೇಳೆಗೆ ಪೂರ್ಣಗೊಳ್ಳಲಿದೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅಥವಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು. ದಶಪಥ ಹೆದ್ದಾರಿ ಕಾಮಗಾರಿ ವೇಳೆ ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಈ ಭಾಗದ ಸಂಸದರು ಹಾಗೂ ಶಾಸಕರು ಅಂಡರ್ ಪಾಸ್‌ಗಳ ನಿರ್ಮಾಣಕ್ಕಾಗಿ ಮನವಿ ಸಲ್ಲಿಸಿದ್ದರು. ಅವರ ಸಲಹೆ ಮತ್ತು ಮನವಿ ಪರಿಗಣಿಸಲಾಗಿದೆ. ಅಲ್ಲದೆ, ಹೊಸಕೋಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ಡಾಬಸ್ ಪೇಟೆ ಹಾಗೂ ರಾಮನಗರ ಸೇರಿದಂತೆ ಪ್ರಮುಖ ನಗರಗಳನ್ನು ಬೆಸೆಯಲು ವರ್ತುಲ ರಸ್ತೆಯನ್ನು ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel