ನಿವಾರ್‌ ಚಂಡಮಾರುತ: ತಮಿಳುನಾಡಿನಲ್ಲಿ ಹೈಅಲರ್ಟ್

November 24, 2020
1:14 PM

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ನ.25ರಂದು ತಮಿಳುನಾಡು ಮತ್ತು ಪುದುಚೆರಿಯ ಕರಾವಳಿ ‍ಪ್ರದೇಶದಲ್ಲಿ ‘ನಿವಾರ್’ ಚಂಡಮಾರುತ ತೀವ್ರವಾಗಿ ಅಪ್ಪಳಿಸುವ ಸಾಧ್ಯತೆ  ಇರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.‌ ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

Advertisement
Advertisement

‘ಮುಂಜಾಗ್ರತಾ ಕ್ರಮವಾಗಿ ಚೆಂಬರಂಬಕ್ಕಂ ಸೇರಿದಂತೆ ಇಲ್ಲಿನ ಜಲಾಶಯಗಳ ಪ್ರದೇಶಗಳ ಮೇಲೆ ನಿರಂತರವಾಗಿ ನಿಗಾವಹಿಸಲಾಗುತ್ತಿದ್ದು, ತಗ್ಗು ಪ್ರದೇಶಗಳಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇವಲ ತಮಿಳುನಾಡು ಮಾತ್ರವಲ್ಲದೇ, ನೆರೆಯ ಆಂಧ್ರ ಪ್ರದೇಶ ಮತ್ತು ಕರ್ನಾಟಕದ ಕೆಲ ಭಾಗಗಳಿಗೂ ನಿವಾರ್ ಚಂಡಮಾರುತದ ಎಪೆಕ್ಟ್ ತಟ್ಟಲಿದ್ದು, ಇಲ್ಲಿಯೂ ಕೂಡ ಭಾರಿ ಮಳೆಯಾಗುವ ಸಾಧ್ಯತೆ  ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ..

ತಮಿಳುನಾಡು ಮತ್ತು ಪುದುಚೆರಿಯ ಕರಾವಳಿ ಭಾಗಗಳಿಗೆ ‘ನಿವಾರ್’ ಚಂಡಮಾರುತ ಅಪ್ಪಳಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಎರಡು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಮೋದಿಯವರು, ‘ನಿವಾರ್ ಚಂಡಮಾರುತದ ಹಿನ್ನೆಲೆಯಲ್ಲಿ ತಮಿಳುನಾಡು ಮತ್ತು ಪುದುಚೆರಿಯಲ್ಲಿ ಉಂಟಾಗಿರುವ ಪರಿಸ್ಥಿತಿ ಬಗ್ಗೆ ಮಾತನಾಡಿದ್ದೇನೆ. ಕೇಂದ್ರದಿಂದ ಸಾಧ್ಯವಾದಷ್ಟು ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದೇನೆ. ಪ್ರವಾಹಪೀಡಿತ ಪ್ರದೇಶಗಳಲ್ಲಿರುವ ಜನರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ’ ಎಂದು ಉಲ್ಲೇಖಿಸಿದ್ದಾರೆ.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 23.05.2025 | ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಉತ್ತಮ ಮಳೆ
May 23, 2025
4:03 PM
by: ಸಾಯಿಶೇಖರ್ ಕರಿಕಳ
ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ಇವರಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಕಡೆಯಿಂದ ಸನ್ಮಾನ
May 23, 2025
3:50 PM
by: ದ ರೂರಲ್ ಮಿರರ್.ಕಾಂ
ಅಪಾರ ಏಕಾದಶಿಯ ನಾಲ್ಕು ಶುಭಯೋಗ | ಐದು ರಾಶಿಯವರಿಗೆ ವಿಷ್ಣುವಿನ ಅನುಗ್ರಹ ಪ್ರಾಪ್ತಿ
May 23, 2025
7:30 AM
by: ದ ರೂರಲ್ ಮಿರರ್.ಕಾಂ
ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ
May 22, 2025
10:48 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group