ಚಿಕ್ಕಮಗಳೂರು ಜಿಲ್ಲೆಯ ದತ್ತಪೀಠದಲ್ಲಿ ದತ್ತ ಮಾಲೆ ಅಭಿಯಾನ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ನವೆಂಬರ್ 9 ಮತ್ತು 10 ರಂದು ಮುಳ್ಳಯ್ಯನಗಿರಿ ಶ್ರೇಣಿಗೆ ಪ್ರವಾಸಿಗರ ಭೇಟಿಗೆ ನಿಷೇಧ ಹೇರಲಾಗಿದೆ. ಜಿಲ್ಲೆಯ ಕೆಲ ಪ್ರವಾಸಿತಾಣಗಳಿಗೆ ಪ್ರವಾಸಿಗರು ಭೇಟಿ ನೀಡುವುದನ್ನು ಜಿಲ್ಲಾಧಿಕಾರಿ ಮೀನಾ ನಾಗರಾಜ್ ನೀಷೇಧಿಸಿ ಆದೇಶ ಹೊರಡಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ದತ್ತ ಮಾಲಾಧಾರಿಗಳು ಅಂದು ದತ್ತಪೀಠಕ್ಕೆ ದರ್ಶನಕ್ಕಾಗಿ ಆಗಮಿಸಲಿದ್ದು ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ದತ್ತಪೀಠ, ಮುಳ್ಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಧಾರ, ಸೀತಾಳಯ್ಯನಗಿರಿ ಪ್ರದೇಶಗಳಿಗೆ ಪ್ರವಾಸಿಗರ ಭೇಟಿ ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel